Saturday, January 28, 2023

Latest Posts

ಸಿದ್ದರಾಮಯ್ಯ ಸ್ಪರ್ಧೆ ಮಾಡಿದರೂ ಬಾದಾಮಿಯಲ್ಲಿ ಕಮಲಕ್ಕೆ ಜಯ: ಸಂಸದ ಗದ್ದಿಗೌಡರ

ಹೊಸದಿಗಂತ ವರದಿ ಬಾಗಲಕೋಟೆ:

ಬಾದಾಮಿ ವಿಧಾನಸಭಾ ಮತಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಯಾರೇ ಸ್ಪರ್ಧಿಸಿದ್ದರೂ ಈ ಬಾರಿ ಬಿಜೆಪಿ ಅಭ್ಯರ್ಥಿ ಗೆಲುವು ಶತಸಿದ್ಧ ಎಂದು ಸಂಸದ ಪಿ.ಸಿ.ಗದ್ದಿಗೌಡರ ವಿಶ್ವಾಸ ವ್ಯಕ್ತಪಡಿಸಿದರು.

ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವದ ಕಾರ್ಯಕ್ರಮ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾದಾಮಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಖಚಿತ. ಕಳೆದ ಬಾರಿ ಹಲವು ಕಾರಣಾಂತರಗಳಿಂದ ಸೋಲು ಕಾಣಬೇಕಾಯಿತು. ಆದರೆ ಈ ಬಾರಿ ನಮ್ಮ ಪಕ್ಷದ ಅಭ್ಯರ್ಥಿ ಗೆಲುವು ನಿಶ್ಚಿತ ಎಂದರು.

ನಾನು ಯಾವುದೇ ಕಾರಣಕ್ಕೂ ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲ್ಲ. ಹಿಂದೆಯೂ ಮಾಡಿಲ್ಲ ಇನ್ನು ಮುಂದೆನೋ ಮಾಡಲ್ಲ.‌ನಮ್ಮ‌ ಪಕ್ಷದಲ್ಲಿ ಘಟಾನುಘಟಿಗಳಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!