ಹೊಸ ದಿಗಂತ ಡಿಜಿಟಲ್ ಡೆಸ್ಕ್:
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿರುವ ಪಂಚಮಸಾಲಿ ಗುರುಪೀಠದಿಂದ ವಚನಾನಂದ ಶ್ರೀ ಅವರನ್ನು ಇಂದು ಪದಚ್ಯುತಿ ಮಾಡಲಾಗಿದೆ .
ಗುರುಪೀಠದಲ್ಲಿ ನಡೆದ ಧರ್ಮದರ್ಶಿ ಸಭೆಯಲ್ಲಿ 12 ಜನ ಧರ್ಮದರ್ಶಿಗಳಿಂದ ಅಂತಿಮ ನಿರ್ಧಾರದ ಬಳಿಕ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ವಚನಾನಂದ ಶ್ರೀ ಅವರನ್ನು ಪದಚ್ಯುತಿ ಮಾಡಲಾಗಿದೆ ಎಂದು ಹರಿಹರ ಪಂಚಮಸಾಲಿ ಪೀಠದ ಟ್ರಸ್ಟಿ ಬಸವರಾಜ ದಿಂಡೂರ ಅವರು ಮಾಹಿತಿ ನೀಡಿದ್ದಾರೆ.
ವಚನಾನಂದ ಶ್ರೀಗಳಿಗೆ ಶ್ವಾಸಪೀಠ ಅಥವಾ ಹರಿಹರ ಪಂಚಮಸಾಲಿ ಪೀಠದಲ್ಲಿ ಇರಬೇಕು ಎಂದು ಗಡುವು ನೀಡಲಾಗಿತ್ತು. ಆದರೆ ಯಾವುದೇ ಒಮ್ಮತದ ನಿರ್ಧಾರ ಬಾರದ ಹಿನ್ನೆಲೆ ಪದಚ್ಯುತಿ ಮಾಡಲಾಗಿದೆ ಎಂದು ತಿಳಿಸಿದರು.
ಜೊತೆಗೆ ಪೀಠದ ಆಡಳಿತ ಮತ್ತು ನಡಾವಳಿಗಳಿಗೆ ಸಂಬಂಧಿಸಿದಂತೆ ಶ್ರೀಗಳಿಂದ ಸ್ಪಷ್ಟನೆ ಕೇಳಿದ್ದೆವು. ಆದರೆ, ಇದು ಯಾವುದಕ್ಕೂ ಪ್ರತಿಕ್ರಿಯೆ ನೀಡಲಿಲ್ಲ . ಹೀಗಾಗಿ ಶ್ರೀಗಳು ಗೌರವಯುತವಾಗಿ ಮಠವನ್ನು ಬಿಡಬೇಕು ಎಂದು ಮನವಿ ಮಾಡಲಾಗಿದೆ ಎಂದು ತಿಳಿಸಿದರು.



