ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಪಚುನಾವಣೆ ಫಲಿತಾಂಶದ ಬಳಿಕ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಜಿಟಿಡಿ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಜಿಟಿ ದೇವೇಗೌಡ, ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ಡೆಮಾಲಿಷ್ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಕುಮಾರಸ್ವಾಮಿ ಈಗ ಬಿಜೆಪಿಯನ್ನು ತಬ್ಬಿಕೊಂಡಿದ್ದಾರೆ. ಮುನಿಸು ಇದ್ದಾಗಲೂ ದೇವೇಗೌಡರು ಮಾತನಾಡುತ್ತಿದ್ದರು. ಸಾ.ರಾ.ಮಹೇಶ್ ತೋಟಕ್ಕೆ ಬಂದು ಹೋದರು, ಆಗಲೂ ಮಾತನಾಡಲಿಲ್ಲ. ಅವರಿಗೂ ನಾನು ಬೇಕಾಗಿಲ್ಲ ಅನಿಸುತ್ತದೆ ಎಂದು ಜಿಟಿ ದೇವೇಗೌಡ ಹೇಳಿದ್ದಾರೆ.
ನಾನು ಈಗ ಹೇಗಿದ್ದೇನೆ ಅದೇ ರೀತಿ ಇರುತ್ತೇನೆ. ಇನ್ನೂ ಮೂರು ವರ್ಷ ಶಾಸಕನಾಗಿ ಇರುತ್ತೇನೆ. ಕ್ಷೇತ್ರದ ಜನರು ತೀರ್ಮಾನ ಮಾಡಬೇಕು ಎಂದು ತಿಳಿಸಿದ್ದಾರೆ.