ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇವದುರ್ಗ ವಿಧಾನಸಭಾ ಕ್ಷೇತ್ರದ ಶಾಸಕಿ ಕರೆಮ್ಮ ಜಿ. ನಾಯಕ್ ಗುರುಗುಂಟಾ ಗ್ರಾಮದ ಬಳಿ ಕಾರು ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡಿದ್ದಾರೆ. ಲಿಂಗಸ್ಗೂರು ತಾಲೂಕು ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಘಟನೆ ಸಂಭವಿಸಿದ್ದು, ಅವರು ದೇವದುರ್ಗದಿಂದ ರಾಯಚೂರಿನತ್ತ ಬರುತ್ತಿದ್ದಾಗ ಮತ್ತೊಂದು ವಾಹನವನ್ನು ಒವರ್‌ಟೇಕ್ ಮಾಡುವ ಪ್ರಯತ್ನದಲ್ಲಿ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿದ್ದಾರೆ.
ಶಾಸಕಿ ಕರೆಮ್ಮ ಜಿ. ನಾಯಕ್ ಅವರೊಂದಿಗೆ ಕೆಲವು ಸಹಾಯಕರು ಮತ್ತು ಚಾಲಕರೂ ಇದ್ದರು. ಶಾಸಕಿ ತಲೆಗೆ ಪೆಟ್ಟು ಬಿದ್ದಿದ್ದರಿಂದ ತಕ್ಷಣ ಲಿಂಗಸ್ಗೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದೆ. ವೈದ್ಯರು ತಕ್ಷಣ ಚಿಕಿತ್ಸೆ ನೀಡಿದ್ದು, ಶಾಸಕಿ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದ್ದಾರೆ. ಕಾರಿನ ಮುಂಭಾಗವು ಅಪಘಾತದಲ್ಲಿ ಸಂಪೂರ್ಣ ಹಾನಿಗೊಳಗಾಗಿದ್ದು, ಚಾಲಕನಿಗೂ ಸಣ್ಣ ಗಾಯಗಳಾಗಿರುವುದು ವರದಿಯಾಗಿದೆ.
ಘಟನೆಯ ಸ್ಥಳಕ್ಕೆ ಲಿಂಗಸ್ಗೂರು ಪೊಲೀಸ್ ಇನ್‌ಸ್ಪೆಕ್ಟರ್ ಮತ್ತು ಸ್ಥಳೀಯ ತಹಶೀಲ್ದಾರ್ ಆಗಮಿಸಿ ಪ್ರಕರಣ ದಾಖಲು ಮಾಡಿ, ತನಿಖೆ ಆರಂಭಿಸಿದ್ದಾರೆ. ಪೊಲೀಸ್ ವರದಿಯ ಪ್ರಕಾರ, ಚಾಲಕ ವೇಗ ಮಿತಿಯನ್ನು ಮೀರಿರುವುದು ಅಪಘಾತದ ಮುಖ್ಯ ಕಾರಣವಾಗಿದೆ.