ದೇವನಹಳ್ಳಿಯ ಆವತಿ ಬೆಟ್ಟಕ್ಕೆ ನಾಳೆ ಅಮಿತ್ ಶಾ ಭೇಟಿ : 500 ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಅಮಿತ್ ಶಾ ಅವರು ಡಿ.31 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಆವತಿ ಬೆಟ್ಟಕ್ಕೆ ಭೇಟಿ ನೀಡಲಿದ್ದು, 35 ಎಕರೆ ಪ್ರದೇಶಲ್ಲಿ ನಿರ್ಮಾಣವಾಗುತ್ತಿರುವ ಬಿಪಿಆರ್ ಡಿ ಕಟ್ಟಡ ನಿರ್ಮಾಣದ ಭೂಮಿ ಪೂಜೆ ನೆರವೇರಿಸಲಿದ್ದಾರೆ.

ನಾಳೆ 11 ಗಂಟೆಗೆ ಕಾರ್ಯಕ್ರಮ ನೆರವೇರಲಿದೆ. ಈ ಹಿನ್ನೆಲೆ ಆವತಿ ಬೆಟ್ಟ ಹಾಗೂ ಖಾಸಗಿ ಶಾಲೆ ಬಳಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಅಮಿತ್ ಶಾ ಭೇಟಿ ಹಿನ್ನೆಲೆ ಆವತಿ ಬೆಟ್ಟಕ್ಕೆ ಸಾರ್ವಜನಿಕರ ವಾಹನ ಪ್ರವೇಶ ಕ್ಕೆ ನಿರ್ಬಂಧ ಹೇರಲಾಗಿದೆ. ಯಾವುದೇ ಅಹಿಕತರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, 10 ಡಿವೈಎಸ್ಪಿ, ಮೂವರು ಎಸ್ ಪಿ, 25 ಸಿಪಿಐ, 100 ಪಿಎಸ್‌ಐ ಸೇರಿ ಒಟ್ಟು 500 ಮಂದಿ ಪೊಲೀಸರನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!