ಆ.20ರಂದು ದೇವರಾಜ ಅರಸು ಉತ್ಸವ: ಪ್ರತಿ ಜಿಲ್ಲೆಯ ಒಬ್ಬ ಸಾಧಕರಿಗೆ ಗೌರವ ಎಂದ ಸಚಿವ ಕೋಟ

ಹೊಸದಿಗಂತ ವರದಿ, ಮಂಗಳೂರು:

ರಾಜ್ಯದಲ್ಲಿ ಆ.20ರಂದು ಮಾಜಿ ಮುಖ್ಯಮಂತ್ರಿ, ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು ಅವರ 107ನೇ ಜನ್ಮ ದಿನಾಚರಣೆಯನ್ನು ಆಚರಿಲಾಗುವುದು. ರಾಜ್ಯ ಮಟ್ಟದ ದೇವರಾಜ ಅರಸು ಪ್ರಶಸ್ತಿಯ ಜೊತೆಗೆ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲು ತೀರ್ಮಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಅವರು ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ರಾಜ್ಯ ಮಟ್ಟದ ಕಾರ್ಯಕ್ರಮ ವಿಧಾನ ಸೌಧದಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿದೆ. ಮುಖ್ಯಮಂತ್ರಿಗಳು ಜನ್ಮ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಶಸ್ತಿ ಪ್ರದಾನ ಮಾಡುವರು. ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರು ಪ್ರಶಸ್ತಿ ಪ್ರದಾನ ಮಾಡಲಿರುವರು ಎಂದರು.

ಜಿಲ್ಲಾ ಮಟ್ಟದಲ್ಲಿ ಸಾಧಕರನ್ನು ಅಂತಿಮಗೊಳಿಸಲು ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ನಾಮ ನಿರ್ದೇಶಿತ ಸದಸ್ಯರನ್ನು ಒಳಗೊಂಡ ಆಯ್ಕೆ ಸಮಿತಿಯನ್ನು ರಚಿಸಲಾಗಿದೆ. ಸಮಿತಿ ಒಬ್ಬರನ್ನು ಪ್ರಶಸ್ತಿಗೆ ಅಂತಿಮಗೊಳಿಸಲಿದೆ. ಜಿಲ್ಲಾ ಮಟ್ಟದ ದೇವರಾಜ ಅರಸ್ ಪ್ರಶಸ್ತಿ ರೂ.50,000 ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ ಎಂದು ಸಚಿವರು ವಿವರಿಸಿದರು.

ಜಿಲ್ಲಾ ಮಟ್ಟದಲ್ಲಿ ಮೂರು ದಿನಗಳ ಕಾರ್ಯಕ್ರಮ ನಡೆಯಲಿದೆ. ಅಲ್ಲಿ ಹಿಂದುಳಿದ ವರ್ಗಗಳ ವೃತ್ತಿ ಮತ್ತು ಕೌಶಲ್ಯಕ್ಕೆ ಒತ್ತು ನೀಡಿ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ತೆರೆದು ಪ್ರೋತ್ಸಾಹ ನೀಡಲಾಗುವುದು ಎಂದು ಕೋಟ ಶ್ರೀನಿವಾಸ ಪೂಜಾರಿ ನುಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!