Thursday, March 30, 2023

Latest Posts

ಪಾಂಡಿಚೇರಿ ವಿರುದ್ಧ ಶತಕ ಸಿಡಿಸಿ ಅಬ್ಬರಿಸಿದ ದೇವದತ್‌ ಪಡಿಕ್ಕಲ್‌, ಉತ್ತಮ ಮೊತ್ತದತ್ತ ಕರ್ನಾಟಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್
ಪಾಂಡಿಚೇರಿ ವಿರುದ್ಧ ನಡೆಯುತ್ತಿರುವ ರಣಜಿ ಟ್ರೋಫಿಯ ಪಂದ್ಯದಲ್ಲಿ ಕರ್ನಾಟಕದ ಯುವ ಆಟಗಾರ ದೇವದತ್‌ ಪಡಿಕ್ಕಲ್‌ ಚೊಚ್ಚಲ ಶತಕ ಸಿಡಿಸಿ ಮಿಂಚಿದ್ದು, ಇದೀಗ ದ್ವಿಶತಕದತ್ತ ದಾಪುಗಾಲಿಟ್ಟಿದ್ದಾರೆ. ಗುರುವಾರದಿಂದ ಆರಂಭವಾಗಿರುವ ಎರಡನೇ ಪಂದ್ಯದಲ್ಲಿ ಟಾಸ್‌ ಸೋತು ಬ್ಯಾಟಿಂಗ್‌ ಗೆ ಇಳಿದ ಕರ್ನಾಟಕ ತಂಡ ದೊಡ್ಡ ಮೊತ್ತದತ್ತ ದಾಪುಗಾಲಿಡುತ್ತಿದೆ.
ಕರ್ನಾಟಕದ ಪರ ಆರಂಭಿಕರಾಗಿ ಕಣಕ್ಕಿಳಿದ ರವಿಕುಮಾರ್ ಸಮರ್ಥ್ ಮತ್ತು ದೇವದತ್ ಪಡಿಕ್ಕಲ್ ಜೋಡಿ ಉತ್ತಮ ಆರಂಭ ನೀಡುವಲ್ಲಿ ವಿಫಲವಾಯಿತು. ಸಮರ್ಥ್ 11 ರನ್‍ಗಳಿಸಿದ್ದಾಗ ವಿಕೆಟ್ ಕೀಪರ್ ಕಾರ್ತಿಕ್‍ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು, ಬಳಿಕ ಅಬ್ಬರಿಸಿದ ಪಡಿಕ್ಕಲ್ ಪಡಿಕ್ಕಲ್‌ 277 ಎಸೆತಗಳಲ್ಲಿ 161 ರನ್‌ ಸಿಡಿಸಿದ್ದು, ಶುಕ್ರವಾರ ಬ್ಯಾಟಿಂಗ್ ಮುಂದುವರೆಸಿದ್ದಾರೆ.
ಮೊದಲನೇ ದಿನದಾಟ ಮುಕ್ತಾಯದ ಹಂತಕ್ಕೆ ಕರ್ನಾಟಕ 90 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 293 ರನ್ ಗಳಿಸಿ ಮೇಲುಗೈ ಸಾಧಿಸಿದೆ. ಸಿಡಿಸಿದ್ದು ನಾಯಕ ಮನೀಶ್ ಪಾಂಡೆ 33 ಎಸೆತಗಳಲ್ಲಿ 21 ರನ್ ಗಳಿಸಿ ಇಂದಿಗೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!