ದೇವೇಗೌಡರೇ ನೀವು ಮೋದಿಯವರನ್ನು ಹೊಗಳಲು ಸುಳ್ಳು ಹೇಳಿದ್ದು ಸರಿಯೇ: ಸಿಎಂ ಸಿದ್ದರಾಮ್ಯಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯಕ್ಕೆ ಖಾಲಿ ಚೊಂಬು ಕೊಟ್ಟಿರುವುದೇ ಪ್ರಧಾನಿ ನರೇಂದ್ರ ಮೋದಿ ಸಾಧನೆ. ದೇವೇಗೌಡರೇ (DeveGowda) ನೀವು ಮೋದಿಯವರನ್ನು ಹೊಗಳಲು ಸುಳ್ಳು ಹೇಳಿದ್ದು ಸರಿಯೇ ಎಂದು ಸಿಎಂ ಸಿದ್ದರಾಮ್ಯಯ (Siddaramaiah) ಪ್ರಶ್ನೆ ಮಾಡಿದ್ದಾರೆ.

ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ಮಾತನಾಡಿದ ಅವರು, ಹಾಲಿ ಪ್ರಧಾನಿ ಮೋದಿ ಮತ್ತು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಚಿಕ್ಕಬಳ್ಳಾಪುರಕ್ಕೆ ಬಂದಿದ್ದರು. ಇಬ್ಬರೂ ನಾಯಕರು ಬರೀ ಸುಳ್ಳುಗಳನ್ನು ಹೇಳಿ ಹೋಗಿದ್ದಾರೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇವೇಗೌಡರು ಹೇಳುತ್ತಾರೆ ಮೋದಿ ಅಕ್ಷಯ ಪಾತ್ರೆ ನೀಡಿದ್ದಾರೆ ಅಂತಾ. ಮೋದಿ ಪ್ರಧಾನಿ ಆದ ಬಳಿಕ 124 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ. ಮೋದಿ ಸರ್ಕಾರ 1 ರೂ. ಕೂಡ ರೈತರ ಸಾಲಮನ್ನಾ ಮಾಡಿಲ್ಲ. 72 ಸಾವಿರ ಕೋಟಿ ರೂ. ರೈತರ ಸಾಲ ಮನ್ನಾ‌ ಮಾಡಿದ್ದು ಕಾಂಗ್ರೆಸ್ ಸರ್ಕಾರ. ನಾನು ರೈತರ ಸಾಲ ಮನ್ನಾ ಮಾಡಿದ್ದೆ ಎಂದು ಹೇಳಿದ್ದಾರೆ.

ಯಡಿಯೂರಪ್ಪ ಸಿಎಂ ಆಗಿದ್ದಾಗ ರೈತರ ಸಾಲ ಮನ್ನಾ ಮಾಡಿ ಎಂದಾಗ ನಾವು ಏನಾದರೂ ನೋಟು ಪ್ರಿಂಟ್ ಮಾಡ್ತೀವಾ ಎಂದಿದ್ದರು. ಲೋಕಸಭಾ ಚುನಾವಣೆಯಲ್ಲಿ 5 ಗ್ಯಾರಂಟಿ ನೀಡಿದ್ದೇವೆ. ರೈತರ ಬೆಳೆಗಳಿಗಾಗಿ ಸ್ವಾಮಿನಾಥನ್ ವರದಿ ಜಾರಿಗೆ ತರುತ್ತೇವೆ. ಬಂಡವಾಳಶಾಹಿಗಳ ಸಾಲಮನ್ನಾ ಮಾಡಿದ್ದೇ ಮೋದಿ ಸಾಧನೆ. ಮೋದಿ ಬಡವರ ಪರ ಇಲ್ಲ, ಬಂಡವಾಳಶಾಹಿಗಳ ಪರವಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ ಈವರೆಗೂ ಹಣ ನೀಡಿಲ್ಲ. ರಾಜ್ಯದಲ್ಲಿ ಬರಗಾಲ ಇದೆ ಈವರೆಗೂ ಬರಪರಿಹಾರ ನೀಡಿಲ್ಲ. ಖುದ್ದು ನಾನೇ ಪ್ರಧಾನಿ ಮೋದಿ ಭೇಟಿಯಾಗಿ ಮನವಿ ಮಾಡಿದ್ದೇನೆ. ಕೇಂದ್ರ ಸಚಿವ ಅಮಿತ್ ಶಾರನ್ನೂ ಭೇಟಿಯಾಗಿ ಮನವಿ ಮಾಡಿದ್ದೇವೆ. ಕೇಂದ್ರ ಸರ್ಕಾರದಿಂದ ಬಿಡಿಗಾಸು ಬಂದಿಲ್ಲ. ಈಗ ಚುನಾವಣಾ ನೀತಿ ಸಂಹಿತೆ ಇದೆ ಎಂದು ಕೇಂದ್ರ ಹೇಳುತ್ತಿದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!