ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಸಭೆಯಲ್ಲಿ ಸಿದ್ದು ಸರ್ಕಾರದ ಮೇಲೆ ದೇವೇಗೌಡರು ಗರಂ ಆಗಿದ್ದಾರೆ. ಶಿರೂರು ಗುಡ್ಡ ಕುಸಿತದ ವಿಷಯದ ಬಗ್ಗೆ ಮಾತನಾಡುತ್ತಾ, ದುರಂತ ಸಂಭವಿಸಿ ದಿನಗಳೇ ಕಳೆದರೂ ಸರ್ಕಾರದ ಕಡೆಯಿಂದ ಯಾರೊಬ್ಬರೂ ಭೇಟಿ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿ ಕೊಟ್ಟ ಬಳಿಕ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಹೆಚ್‌ಡಿಕೆ ಭೇಟಿ ಕೊಟ್ಟ ಬಳಿಕವಷ್ಟೇ ಸಿಎಂ, ಸಚಿವರು ಭೇಟಿ ನೀಡಿ ಪರಿಶೀಲಿಸಿದರು. ಇದು ಕರ್ನಾಟಕ ಸರ್ಕಾರ ಹೇಗೆ ಕೆಲಸ ಮಾಡುತ್ತಿದೆ ಎನ್ನುವುದನ್ನು ತೋರಿಸುತ್ತಿದೆ. ದುರಂತದಲ್ಲಿ ಜನರು ಸತ್ತಿದ್ದಾರೆ. ರಾಜ್ಯ ಸರ್ಕಾರ ಏನು ಮಾಡುತ್ತಿದೆ? ಎಂದು ಸಿದ್ದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.