ಪ್ರಧಾನಿ ಮೋದಿ ಭೇಟಿ ಮಾಡಿ ರಾಜ್ಯದ ಅಭಿವೃದ್ಧಿಗೆ ಮನವಿ ಸಲ್ಲಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಮಂಗಳವಾರ ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಕರ್ನಾಟಕದ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಿದರು.
ಕರ್ನಾಟಕದಲ್ಲಿ ಹಾಸನ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ಯೋಜನೆಯು ಕೇಂದ್ರೀಕರಿಸಬೇಕಾದ ವಿಷಯಗಳ ಕುರಿತು ದೇವೇಗೌಡರು ಪ್ರಧಾನಿ ಮೋದಿಯವರಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಿದರು. ಅಂತರರಾಜ್ಯ ನದಿಗಳಾದ ಕಾವೇರಿ, ಕೃಷ್ಣಾ, ಮಹದಾಯಿ ನೀರು ಹಂಚಿಕೆ ಮತ್ತು ಕುಂಚಿಟಿಗರನ್ನು ಒಕ್ಕಲಿಗ ಉಪಜಾತಿಯಾಗಿ ಇತರೆ ಹಿಂದುಳಿದ ಜಾತಿಗಳ (ಒಬಿಸಿ) ಕೇಂದ್ರ ಪಟ್ಟಿಗೆ ಸೇರಿಸುವಂತೆ ಸಮುದಾಯದ ಪರವಾಗಿ ಪ್ರಧಾನಿ ಮೋದಿಯವರಿಗೆ ಮನವಿ ಸಲ್ಲಿಸಿದರು.
ಪ್ರಧಾನಿ ಮೋದಿ ಅವರು ನಮ್ಮೆಲ್ಲಾ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿದ್ದಾರೆ ಮತ್ತು ಖಂಡಿತವಾಗಿಯೂ ಈ ವಿಷಯವನ್ನು ಪರಿಶೀಲಿಸುತ್ತಾರೆ ಎಂದು ಚರ್ಚಡೆ ಬಳಿಕ ದೇವೇಗೌಡರು ಹೇಳಿದರು.
“ನದಿ, ನೀರಾವರಿ, ಕುಂಚಿಟಿಗ ಜಾತಿಗೆ ಮೀಸಲಾತಿ ಮತ್ತಿತರ ವಿಚಾರಗಳನ್ನು ನನ್ನ ಜ್ಞಾಪಕ ಪತ್ರದಲ್ಲಿ ಪ್ರಸ್ತಾಪಿಸಿದ್ದೇನೆ. ಪ್ರಧಾನಿಯವರು ಈ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ನಾನು ನೀಡಿದ ಎಲ್ಲಾ ಪತ್ರಗಳನ್ನು ಅವರು ಪರಿಶೀಲಿಸಿದ್ದಾರೆ ಮತ್ತು ಖಂಡಿತವಾಗಿ ಪರಿಗಣಿಸುವುದಾಗಿ ಭರವಸೆ ನೀಡಿದ್ದಾರೆ” ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!