Wednesday, October 22, 2025

ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಕಳೆದ ಒಂದು ವಾರದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದೇವೇಗೌಡರು ಇದೀಗ ಸಂಪೂರ್ಣ ಚೇತರಿಸಿಕೊಂಡಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ಡಿಸ್ಚಾರ್ಜ್ ಆಗಿದ್ದಾರೆ.

ಜ್ವರ ಹಾಗೂ ಯೂರಿನ್ ಇನ್​ಫೆಕ್ಷನ್​​ನಿಂದ ಆಸ್ಪತ್ರೆಗೆ ದಾಖಲಾಗಿದ್ದ ದೇವೇಗೌಡರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ವೈದ್ಯರ ಸಲಹೆಯಂತೆ ಮುಂದಿನ ಕೆಲವು ದಿನಗಳು ಮನೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ.

error: Content is protected !!