ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇವೇಗೌಡರ ಅಳಿಯ ಡಾ. ಸಿ.ಎನ್. ಮಂಜುನಾಥ್ ಅವರನ್ನು ಜೆಡಿಎಸ್ ಬಿಟ್ಟು ಬಿಜೆಪಿ ಚಿಹ್ನೆಯಿಂದ ಸ್ಪರ್ಧೆ ಮಾಡಲು ಅವಕಾಶ ನೀಡಿದ್ದು ಜೆಡಿಎಸ್‌ನ ಮೊದಲ ಆತ್ಮಹತ್ಯೆ ಪ್ರಯತ್ನ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯಿಸಿದರು.
ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಡಾ. ಸಿ.ಎನ್. ಮಂಜುನಾಥ್ ಅವರು ದೇವೇಗೌಡರ ಅಳಿಯ. ಅವರೇ ಜೆಡಿಎಸ್‌ನಿಂದ ಸ್ಪರ್ಧೆ ಮಾಡದೆ ಬಿಜೆಪಿ ಚಿಹ್ನೆಯಡಿ ಸ್ಪರ್ಧಿಸುತ್ತಾರೆ ಎಂದರೆ ಪರಿಸ್ಥಿತಿಯನ್ನು ಯಾರು ಬೇಕಾದರೂ ಊಹಿಸಬಹುದು ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಎರಡು ಲೋಕಸಭಾ ಸ್ಥಾನಕ್ಕಾಗಿ ಮೈತ್ರಿ ಮಾಡಿಕೊಳ್ಳಬೇಕಿತ್ತೇ ಎಂಬ ಎಚ್.ಡಿ ಕುಮಾರಸ್ವಾಮಿ ಮತ್ತು ಜೆಡಿಎಸ್‌ನ ಕೋರ್ ಕಮಿಟಿ ಪದಾಧಿಕಾರಿಗಳ ಹೇಳಿಕೆಗೆ ಅವರು, ಇದನ್ನು ನಾನು ನಿರೀಕ್ಷೆ ಮಾಡಿದ್ದೆ. ಬಿಜೆಪಿ ಮೈತ್ರಿಯಿಂದ ಜೆಡಿಎಸ್ ಪಕ್ಷಕ್ಕೆ ಬಹಳ ಮುಜುಗರವಾಗಿದೆ. ಅವರ ಆಂತರಿಕ ವಿಚಾರವಾಗಿ ನಾನು ಮಾತನಾಡುವುದಿಲ್ಲ. ಜೆಡಿಎಸ್ ಗೆ ಕೆಲವು ಕ್ಷೇತ್ರಗಳಲ್ಲಿ ಸ್ವಂತ ಶಾಸಕರು, ಸಂಸದರು ಇದ್ದಾರೆ. ಅವರ ಶಕ್ತಿ ಪಕ್ಷಕ್ಕೆ ಬೇಕಾಗಿದೆ. ಆದರೆ ಕರ್ನಾಟಕ ಮಾತ್ರವಲ್ಲ ಬೇರೆ ರಾಜ್ಯಗಳಲ್ಲೂ ಬಿಜೆಪಿ ಇದೇ ರೀತಿ ಮಾಡಿಕೊಂಡು ಬಂದಿದೆ. ಇದು ಅವರ ಪಕ್ಷಗಳ ಆಂತರಿಕ ವಿಚಾರ. ಆ ಬಗ್ಗೆ ಅವರೇ ತೀರ್ಮಾನ ಮಾಡಿಕೊಳ್ಳಲಿ. ನನಗೂ ಅದಕ್ಕೂ ಸಂಬಂಧವಿಲ್ಲಎಂದು ಹೇಳಿದರು.
Vote counting agvaga nive susaid madkolbekagbhudu