ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೋದಿ ಅವರು ನಿಯಮ, ನಿಷ್ಠೆ, ಶಿಸ್ತಿನಿಂದ ರಾಮ ದೇವರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು.
ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸ್ತ್ರೋಕ್ತವಾಗಿ ಶ್ರದ್ಧೆಯಿಂದ ಎಲ್ಲ ನಿಯಮಗಳನ್ನು ಪಾಲನೆ ಮಾಡುತ್ತಿದ್ದಾರೆ.ನಾನು ಕೂಡ ಇಂತಹ ವ್ರತಾಚರಣೆ ಮಾಡಿರಲಿಲ್ಲ. ಮೋದಿಗೆ ಅವರಿಗೆ ದೈವ ಶಕ್ತಿ ಇದೆ ಎಂದು ಹೇಳಿದರು.
ಮೋದಿ ಅವರಿಂದ 11 ದಿನಗಳ ವ್ರತಾಚರಣೆ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ ದೇವೇಗೌಡರು, ಮೋದಿ ಅವರು ನಿಷ್ಠೆಯಿಂದ, ಕ್ರಮಬದ್ಧತೆಯಿಂದ ವ್ರತಾಚರಣೆ ಮಾಡುತ್ತಿದ್ದಾರೆ. ಸೀತಾಮಾತೆ ಅಪಹರಣ ಮಾಡಿದ ನಾಸಿಕ್‌ನಿಂದ ಅವರು ವ್ರತಾಚರಣೆ ಶುರು ಮಾಡಿದ್ದಾರೆ. ಅಲ್ಲಿ ಕರಿರಾಮ ಅಂತ ವಿಗ್ರಹ ಸ್ಥಾಪನೆ ಮಾಡಿದ್ದಾರೆ ಎಂದರು.
ನಾನು ಕೂಡ ರಾಮಮಂದಿರ ಕಾರ್ಯಕ್ರಮಕ್ಕೆ ಹೋಗುತ್ತೇನೆ. ಶೇ.99 ನಾನು ಹೋಗುತ್ತೇನೆ. ನನ್ನ ಶ್ರೀಮತಿ ಜತೆ ಹೋಗುವೆ ಎಂದು ಹೇಳಿದರು.