September 30, 2026
Wednesday, September 30, 2026
spot_img

ಬೆಂಗಳೂರಿನಿಂದ ಮಂಗಳೂರಿಗೆ ಕೈಗಾರಿಕಾ ಕಾರಿಡಾರ್‌ ವಿಸ್ತರಿಸಿ ಎಂದ ದೇವೇಗೌಡ್ರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರಿನಿಂದ ಮಂಗಳೂರಿಗೆ ಕೈಗಾರಿಕಾ ಕಾರಿಡಾರ್‌ ವಿಸ್ತರಿಸಬೇಕು ಎಂದು ಸಲಹೆ ಕೊಡ್ತಿದ್ದೀನಿ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.

ರಾಷ್ಟ್ರದ ಮೂರು ಪ್ರಮುಖ ಬಂದರುಗಳನ್ನು ಜೋಡಿಸುವ ಬೆಂಗಳೂರಿನಿಂದ ಮಂಗಳೂರಿನವರೆಗೆ ಕೈಗಾರಿಕಾ ಕಾರಿಡಾರ್ ವಿಸ್ತರಣೆ ಹಾಗೂ ಹಲಸು, ಹುಣಸೆ, ನೇರಳೆ ಮಂಡಳಿ ರಚನೆ ಮಾಡಬೇಕು ಎಂದು ಕೋರಿದರು.

ಈಗಾಗಲೇ ಚೆನ್ನೈನಿಂದ ಬೆಂಗಳೂರು ಮತ್ತು ಹೈದರಾಬಾದ್‌ನಿಂದ ಬೆಂಗಳೂರು ನಡುವಿನ ಪ್ರಮುಖ ಬಂದರುಗಳನ್ನು ಹೊಂದಿರುವ ಕೈಗಾರಿಕಾ ಕಾರಿಡಾರ್ ಯೋಜನೆಗಳಿಗೆ ಅನುಮೋದನೆ ನೀಡುವ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಅದೇ ರೀತಿ, ಬೆಂಗಳೂರಿನಿಂದ ಮಂಗಳೂರಿನವರೆಗೆ ಈ ಕೈಗಾರಿಕಾ ಕಾರಿಡಾರ್ ವಿಸ್ತರಿಸಿದರೆ ಕೈಗಾರಿಕಾ ಅಭಿವೃದ್ಧಿಗೆ ಬಹಳಷ್ಟು ಅನುಕೂಲ ಆಗುತ್ತದೆ ಎಂದಿದ್ದಾರೆ.

ಮಂಗಳೂರು ಕೂಡ ಪ್ರಮುಖ ಬಂದರು ಆಗಿದ್ದು, ವಿಶಾಖಪಟ್ಟಣ, ಚೆನ್ನೈ ಹಾಗೂ ಮಂಗಳೂರು ಬಂದರುಗಳನ್ನು ಜೋಡಿಸಿದರೆ ರಾಷ್ಟ್ರದ ಕೈಗಾರಿಕಾಭಿವೃದಿಗೆ ಪರಿವರ್ತನಾತ್ಮಕ ವೇಗ ಬರುತ್ತದೆ ಎಂದಿದ್ದಾರೆ.

Must Read