‘ವಿಕಸಿತ ಭಾರತ– ಇದು ಮೋದಿ ಗ್ಯಾರಂಟಿ’: ಕರ್ನಾಟಕದಲ್ಲಿ ಬಿಜೆಪಿಯಿಂದ ಸಂಕಲ್ಪ ಪತ್ರ ಅಭಿಯಾನ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸಂಕಲ್ಪ ಪತ್ರ ಜನಾಭಿಪ್ರಾಯ ಸಂಗ್ರಹಣಾ ಅಭಿಯಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಸಲಹಾ ಪೆಟ್ಟಿಗೆ ಇಡಲಾಗುತ್ತದೆ. 9090902024 ವಾಟ್ಸಾಪ್​ ನಂಬರ್​ಗೆ ಅಭಿಪ್ರಾಯ ಕಳುಹಿಸಬಹುದು. ಅಲ್ಲದೇ ನಮೋ ಆ್ಯಪ್​ ಮೂಲಕವೂ ತಮ್ಮ ಅಭಿಪ್ರಾಯವನ್ನು ತಿಳಿಸಬಹುದು ಎಂದು ಹೇಳಿದರು.

ಮುಂದಿನ ಲೋಕಸಭಾ ಚುನಾವಣೆಯ (Parliament Election 2024) ಕ್ಷಣಗಣನೆ ಸಂದರ್ಭದಲ್ಲಿ ನರೇಂದ್ರ ಮೋದಿಜೀ ಮತ್ತು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಚಿಂತನೆಯಂತೆ ಪ್ರಣಾಳಿಕೆ ಬದಲು ಜನಾಭಿಪ್ರಾಯ ಪಡೆದು ಸಂಕಲ್ಪ ಪತ್ರದ ಮೂಲಕ ಚುನಾವಣೆ ಎದುರಿಸಲಾಗುತ್ತಿದೆ. ಕರ್ನಾಟಕದಲ್ಲಿ ಅಭಿಯಾನ ಮಾರ್ಚ್ 3ರಿಂದ 15ರ ತನಕ ನಡೆಯಲಿದೆ.

‘ವಿಕಸಿತ ಭಾರತ – ಇದು ಮೋದಿ ಗ್ಯಾರಂಟಿ’ ಈ ವಿಷಯದ ಕುರಿತು ರಾಜ್ಯಾದ್ಯಂತ ವಿಡಿಯೋ ವ್ಯಾನ್ ಹಾಗೂ ಸಲಹೆ ಪೆಟ್ಟಿಗೆಗಳ ಮೂಲಕ ಮುಂದಿನ 5 ವರ್ಷಗಳ ಗುರಿಯ ಕುರಿತು ರಾಜ್ಯದ ಜನರ ಆಶೀರ್ವಾದ ಪಡೆದು ಸಲಹೆಗಳನ್ನು ತೆಗೆದುಕೊಳ್ಳಲು ನಿರ್ಧರಿಸಲಾಗಿದೆ ಎಂದು ವಿವರಿಸಿದರು.

ಜನಸಂಘ ಕಾಲದಿಂದ ಪ್ರಣಾಳಿಕೆಯಲ್ಲಿ ಡಾ. ಶ್ಯಾಮಪ್ರಸಾದ ಮುಖರ್ಜಿ ಅವರ ಬಲಿದಾನಕ್ಕೆ ಕಾರಣವಾದ ಜಮ್ಮು- ಕಾಶ್ಮೀರದ 370ನೇ ವಿಧಿ ರದ್ದು ಮಾಡುವ ಮೂಲಕ ಮೋದಿಯವರು ನುಡಿದಂತೆ ನಡೆದಿದ್ದಾರೆ. ಅಯೋಧ್ಯೆಯ ಭವ್ಯ ರಾಮಮಂದಿರ ನಿರ್ಮಾಣ ಮಾಡಲಾಗಿದೆ. ಈ ಬಾರಿ ಘೋಷಣಾ ಪತ್ರ ಪ್ರಣಾಳಿಕೆ ಬದಲು ಸಂಕಲ್ಪ ಪತ್ರ ಮುಂದಿಡಲಾಗುವುದು .ಸ್ವಾತಂತ್ರ್ಯೋತ್ಸವದ 100ನೇ ವರ್ಷಾಚರಣೆ ವೇಳೆ 2047ರಲ್ಲಿ ನಮ್ಮ ಭಾರತ ವಿಕಸಿತ ಭಾರತ ಎಂಬ ಸಂಕಲ್ಪವನ್ನು ಮೋದಿಜೀ ಅವರು ಮುಂದಿಟ್ಟಿದ್ದಾರೆ. ಅದನ್ನು ಸಾಕಾರಗೊಳಿಸಲು ಅಭಿಪ್ರಾಯ ಸಂಗ್ರಹದ ಅಭಿಯಾನ ಆರಂಭಿಸಿದೆ. ಸಮಾಜದ ರೈತರು, ಮಹಿಳೆಯರು, ಯುವಜನತೆ ಸೇರಿ ಎಲ್ಲ ವರ್ಗದ ಜನರಿಂದ ಅಭಿಮತ ಸಂಗ್ರಹಿಸಲಿದ್ದೇವೆ ಎಂದು ಹೇಳಿದರು.

ಬಿಜೆಪಿ ಕೇಂದ್ರ ಸರಕಾರವು 2014ರ, 2019ರ ಚುನಾವಣೆ ಸಂದರ್ಭದಲ್ಲಿ ನೀಡಿದ ಬಹುತೇಕ ಎಲ್ಲ ಭರವಸೆಗಳನ್ನು ಈಡೇರಿಸಿದೆ. 10 ವರ್ಷದ ನರೇಂದ್ರ ಮೋದಿ ಅವರ ಅವರ ಆಡಳಿತಾವಧಿಯಲ್ಲಿ ಭರವಸೆ ಈಡೇರಿಸಿದ್ದಲ್ಲದೆ, ಯೋಜನೆ ಶಂಕುಸ್ಥಾಪನೆ ಜೊತೆಗೆ ಉದ್ಘಾಟನಾ ದಿನಾಂಕ ನಿಗದಿಪಡಿಸಿ ಸಕಾಲದಲ್ಲಿ ಪೂರ್ಣಗೊಳಿಸಿದ್ದನ್ನು ನೋಡಿದ್ದೇವೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!