ಉತ್ತರ ಪ್ರದೇಶದಲ್ಲಿ ‘ಡಬಲ್‌ ಎಂಜಿನ್‌’ ಸರ್ಕಾರದಿಂದ ಅಭಿವೃದ್ಧಿ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶದಲ್ಲಿ ₹ 10 ಲಕ್ಷ ಕೋಟಿಗೂ ಅಧಿಕ ಮೊತ್ತದ ವಿವಿಧ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ‘ಡಬಲ್‌ ಎಂಜಿನ್’ ಸರ್ಕಾರದ ಏಳು ವರ್ಷಗಳ ಅವಧಿಯಲ್ಲಿ ಉತ್ತರ ಪ್ರದೇಶ ಸಾಕಷ್ಟು ಬದಲಾಗಿದೆ. ಆದರೆ, ರಾಜ್ಯವು ಅಭಿವೃದ್ಧಿ ಸಾಧಿಸಲಿದೆ ಎಂಬುದನ್ನು ಕೆಲವು ವರ್ಷಗಳ ಹಿಂದೆ ಯಾರೂ ಅಂದಾಜಿಸಿರಲಿಲ್ಲ ಎಂದು ಪ್ರ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಇಷ್ಟು ಪ್ರಮಾಣದ ಹೂಡಿಕೆ ಮತ್ತು ಉದ್ಯೋಗದ ವಾತಾವರಣ ಸೃಷ್ಟಿಯಾಗಲಿದೆ ಎಂದು 7-8 ವರ್ಷಗಳ ಹಿಂದೆ ಯಾರೂ ಅಂದಾಜಿಸಿರಲಿಲ್ಲ. ಅಪರಾಧ ಮತ್ತು ಗಲಭೆಗಳು ಸಾಮಾನ್ಯವಾಗಿದ್ದ ಉತ್ತರ ಪ್ರದೇಶವು ಈ ರೀತಿ ಅಭಿವೃದ್ಧಿ ಹೊಂದಲಿದೆ ಎಂಬುದನ್ನು ಯಾರೊಬ್ಬರೂ ನಂಬಿರಲಿಲ್ಲ ಮೋದಿ ಹೇಳಿದರು.

ಉತ್ತರ ಪ್ರದೇಶದಲ್ಲಿ ‘ಡಬಲ್‌ ಎಂಜಿನ್‌’ ಸರ್ಕಾರ ರಚನೆಯಾಗಿ ಏಳು ವರ್ಷಗಳಾಗಿವೆ. ಇಷ್ಟು ವರ್ಷಗಳಲ್ಲಿ ರಾಜ್ಯ ಸರ್ಕಾರವು ‘ಕೆಂಪು ಪಟ್ಟಿ’ ಸಂಸ್ಕೃತಿಯನ್ನು ತೊಡೆದುಹಾಕಿ, ‘ಕೆಂಪು ಹಾಸು’ ಸಂಸ್ಕೃತಿ ಅಳವಡಿಸಿಕೊಂಡಿದೆ. ಕಳೆದ ಏಳು ವರ್ಷಗಳಲ್ಲಿ ಅಪರಾಧ ಪ್ರಕರಣಗಳು ಕುಸಿದು, ಉದ್ಯಮ ಸಂಸ್ಕೃತಿ ವಿಸ್ತರಣೆಗೊಂಡಿದೆ. ವ್ಯಾಪಾರ, ಅಭಿವೃದ್ಧಿಗೆ ಪೂರಕ ವಾತಾವರಣ ಮತ್ತು ವಿಶ್ವಾಸ ವೃದ್ಧಿಯಾಗಿದೆ’ ಎಂದು ಆಭಿಪ್ರಾಯಪಟ್ಟಿದ್ದಾರೆ.

ಮನೋಬಲವಿದ್ದರೆ, ಅಭಿವೃದ್ಧಿ ಕಾರ್ಯಗಳನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂಬುದನ್ನು ಬಿಜೆಪಿಯ ‘ಡಬಲ್‌ ಎಂಜಿನ್‌’ ಸರ್ಕಾರ ತೋರಿಸಿಕೊಟ್ಟಿದೆ. ಉತ್ತರ ಪ್ರದೇಶದ ರಫ್ತು ಸಾಮರ್ಥ್ಯ ಕಳೆದ ಕೆಲ ವರ್ಷಗಳಲ್ಲಿ ದ್ವಿಗುಣಗೊಂಡಿದೆ. ವಿದ್ಯುತ್‌ ಉತ್ಪಾದನೆ ಹಾಗೂ ವಿತರಣೆಯಲ್ಲಿ ಪ್ರಶಂಸನೀಯ ಸಾಧನೆ ಮಾಡಿದೆ. ದೇಶದಲ್ಲೇ ಅತಿ ಹೆಚ್ಚಿನ ಸಂಖ್ಯೆಯ ಎಕ್ಸ್‌ಪ್ರೆಸ್‌ ರಸ್ತೆಗಳು ಉತ್ತರ ಪ್ರದೇಶದಲ್ಲಿ ಇವೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!