Friday, March 31, 2023

Latest Posts

ರಾಜ್ಯ ಬಜೆಟ್ | ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಇರುವ 75 ಜಂಕ್ಷನ್‌ಗಳನ್ನು 150 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯ ಬಜೆಟ್‌ ಅನ್ನು ಮಂಡಿಸುತ್ತಿದ್ದು, ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಇರುವ 75 ಜಂಕ್ಷನ್‌ಗಳನ್ನು 150 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡುವುದಾಗಿ ಘೋಷಿಸಿದ್ದಾರೆ.

ಬೆಂಗಳೂರು ನಗರದ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು, ಹೆಚ್ಚು ಸಂಚಾರ ದಟ್ಟಣೆ ಇರುವ ಪ್ರಮುಖ 75 ಜಂಕ್ಷನ್‌ಗಳನ್ನು 150 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಿದೆ. ಇದಕ್ಕೆ ಪೂರಕವಾಗಿ Artificial Intelligence ನ ಬಳಕೆಯೊಂದಿಗೆ ಟ್ರಾಫಿಕ್‌ ಸಿಗ್ನಲ್‌ಗಳ ನಿರ್ವಹಣೆ ಮಾಡುವ ಮೂಲಕ Seamless Signalling ಅನ್ನು ಅಳವಡಿಸಿಕೊಂಡು ಸಂಚಾರ ದಟ್ಟಣೆ ಕಡಿಮೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!