ಹೊಸದಿಗಂತ ಡಿಜಿಟಲ್ ಡೆಸ್ಕ್:
ಏರ್‌ಪೋರ್ಟ್ ಮಾದರಿಯಲ್ಲಿ ಮೆಜೆಸ್ಟಿಕ್ ರೈಲು ನಿಲ್ದಾಣ ಅಭಿವೃದ್ಧಿ ಮಾಡುತ್ತೇವೆ ಎಂದು ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಅಭಿವೃದ್ಧಿಗೆ ಡಿಪಿಆರ್ ಸಿದ್ಧವಾಗಿದೆ. ರೈಲು ನಿಲ್ದಾಣ ಅಭಿವೃದ್ಧಿ ಬಗ್ಗೆ ರೈಲ್ವೆ ಮಂಡಳಿ ಕೆಲ ಸ್ಪಷ್ಟನೆ ಕೇಳಿದೆ. ಮುಂದಿನ ದಿನಗಳಲ್ಲಿ ರೈಲ್ವೆ ಮಂಡಳಿ ಮುಂದೆ ಇಡುತ್ತೇವೆ. ಒಳ್ಳೆಯ ಕೆಲಸಗಳಿಗೆ ಪ್ರಧಾನಿ ನರೇಂದ್ರ ಮೋದಿ ಬೇಡ ಎನ್ನುವುದಿಲ್ಲ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಜೊತೆ ಚರ್ಚಿಸಿ ಕೆಲಸ ಆರಂಭಿಸುತ್ತೇವೆ ಎಂದು ತಿಳಿಸಿದ್ದಾರೆ.
ಸುಮಾರು 1500 ಕೋಟಿ ರೂ. ವೆಚ್ಚದಲ್ಲಿ ಏರ್ಪೋರ್ಟ್ಗಿಂತ ವಿಭಿನ್ನವಾಗಿ ಮೆಜೆಸ್ಟಿಕ್ ರೈಲು ನಿಲ್ದಾಣ ಅಭಿವೃದ್ಧಿ ಮಾಡುತ್ತೇವೆ. ಏರ್ಪೋರ್ಟ್ನಲ್ಲಿ ಸಿಗುವ ಎಲ್ಲಾ ಸವಲತ್ತುಗಳು ಸಿಗಲಿದೆ. 160 ಎಕರೆ ಜಾಗ ಇದೆ. ನಿರೋದ್ಯೋಗಿಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.