ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಜನ್ನ ಮನ್ನಣೆ ಸಿಗುತ್ತಿದೆ ಎಂಬುದಕ್ಕೆ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶವೇ ಸಾಕ್ಷಿ: ಎಸ್.ಟಿ.ಸೋಮಶೇಖರ್

ಹೊಸ ದಿಗಂತ ವರದಿ, ಮೈಸೂರು:

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಯಶಸ್ಸು ಸಾಧಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಅಭಿವೃದ್ಧಿ ಕಾರ್ಯಗಳಿಗೆ ಜನಮನ್ನಣೆ ಸಿಗುತ್ತಿದೆ ಎಂಬುದಕ್ಕೆ ಈ ಚುನಾವಣೆ ಫಲಿತಾಂಶವೇ ಸಾಕ್ಷಿಯಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಉತ್ತರಪ್ರದೇಶದಲ್ಲಿ ಸತತ ಎರಡನೇ ಬಾರಿಗೆ ಬಿಜೆಪಿ ಅಧಿಕಾರ ಹಿಡಿಯುತ್ತಿದ್ದು, ಇದು ಆಡಳಿತ ಪರವಾದ ಅಲೆ ಎಂದರೆ ತಪ್ಪಾಗಲಾರದು. ಬಿಜೆಪಿಯ ತತ್ವ ಸಿದ್ದಾಂತಗಳು ಹಾಗೂ ನರೇಂದ್ರ ಮೋದಿ ಅವರ ನಾಯಕತ್ವವನ್ನು ಜನ ಮೆಚ್ಚಿದ್ದಾರೆ. ಪ್ರಾಮಾಣಿಕ ಕೆಲಸಕ್ಕೆ ಸಿಕ್ಕ ಜಯ ಇದಾಗಿದೆ. ಪಕ್ಷ ಸಂಘಟನೆ, ಕಾರ್ಯಕರ್ತರ ಶ್ರಮ, ಜನತೆಯ ಆಶೀರ್ವಾದದ ಜೊತೆಗೆ ಉತ್ತಮ ನಾಯಕತ್ವದಿಂದಾಗಿ ಬಿಜೆಪಿ ಇಂದು ಮುನ್ನುಗ್ಗುತ್ತಿದೆ. ಈ ಫಲಿತಾಂಶ ಪಕ್ಷದ ಕಾರ್ಯಕರ್ತರನ್ನು ಮತ್ತಷ್ಟು ಉರಿದುಂಬಿಸಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!