343.74 ಕೋಟಿ ವೆಚ್ಚದಲ್ಲಿ ಚಾರ್ಮಾಡಿ ಘಾಟ್ ರಸ್ತೆ ಅಭಿವೃದ್ಧಿ: ನಳಿನ್ ಕುಮಾರ್ ಕಟೀಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: 

ರಾಷ್ಟ್ರೀಯ ಹೆದ್ದಾರಿ-73 ರ ಮಂಗಳೂರು- ಮೂಡಿಗೆರೆ-ತುಮಕೂರು ವಿಭಾಗದ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ 10.8 ಕಿ.ಮೀ.ಉದ್ದದ ಪೇವ್ದ್ ಶೋಲ್ಡರ್ ನೊಂದಿಗೆ ದ್ವಿಪಥ ರಸ್ತೆಯಾಗಿ ಅಗಲೀಕರಣ ಕಾಮಗಾರಿಗೆ ಇಪಿಸಿ ಆಧಾರದಲ್ಲಿ ಅನುಮೋದನೆ ನೀಡಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವುದಾಗಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಈ ಕುರಿತು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಪತ್ರ ಬರೆದು ಮಾಹಿತಿ ನೀಡಿದ್ದಾರೆ .

ಸಚಿವ ನಿತಿನ್ ಗಡ್ಕರಿ ಅವರ ಅನುಮೋದನೆ ಪಾತ್ರಕ್ಕೆಸಂತಸ ವ್ಯಕ್ತಪಡಿಸಿದ ನಳಿನ್ ಕುಮಾರ್ ಕಟೀಲ್ , 2023-24ನೇ ಸಾಲಿನ ವಾರ್ಷಿಕ ಯೋಜನೆಯಡಿಯಲ್ಲಿ ಸುಮಾರು ರೂ. 343.74 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ರಸ್ತೆಯು ರಸ್ತೆ ಬಳಕೆದಾರರಿಗೆ ಉತ್ತಮ ರಸ್ತೆ ಸಂಪರ್ಕವನ್ನು ಒದಗಿಸಲಿದ್ದು, ಜಿಲ್ಲೆಯ ಆರ್ಥಿಕ ಬೆಳವಣಿಗೆಗೆ ಅಗತ್ಯವಾದ ಬೆಂಬಲವನ್ನು ಒದಗಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಲಿದೆ. ಜಿಲ್ಲೆಗೆ ಮಹತ್ವದ ಹೆದ್ದಾರಿ ಯೋಜನೆಗಳನ್ನು ನೀಡಿರುವ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಜಿಯವರಿಗೆ ಹಾಗೂ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

  1. ದಯವಿಟ್ಟು ನಂತೂರು ಮೇಲ್ಸೇತುವೆ ನಿರ್ಮಾಣಕ್ಕೆ ಚಾಲನೆ ನೀಡಿ…

LEAVE A REPLY

Please enter your comment!
Please enter your name here

error: Content is protected !!