ಹೊಸದಿಗಂತ ವರದಿ, ಹುಬ್ಬಳ್ಳಿ:
ನಗರದ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣವನ್ನು ವಿಶ್ವ ದರ್ಜೆ ಮಾದರಿಯಲ್ಲಿ ಮಾಡುವ ಗುರಿ ಹೊಂದಿದ್ದು, ಕೇಂದ್ರ ಸರ್ಕಾರದ ಈ ಅವಧಿಯಲ್ಲಿ ಅನುಮೋದನೆಗೊಳಿಸಿ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ನಗರದ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣದಲ್ಲಿ ಪಿಎಂ ಗತಿಶಕ್ತಿ ಯೋಜನೆಯಡಿ ಹುಬ್ಬಳ್ಳಿ ವಿಭಾಗದಿಂದ ನಿರ್ಮಿಸಲಾದ ನೂತನ ಎಕ್ಸ್‌ಲೆಟರ್ ಗೆ ಶನಿವಾರ ಚಾಲನೆ ನೀಡಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
ವರ್ಲ್ಡ್‌ಕ್ಲಾಸ ರೈಲು ನಿಲ್ದಾಣ ಮಾಡಲು ಯೋಜನೆ ರೂಪಿಸಲಾಗುತ್ತಿದೆ. ಹುಬ್ಬಳ್ಳಿ ನಿಲ್ದಾಣ ಉನ್ನತೀಕರಣ ಕೇಂದ್ರ ಸರ್ಕಾರ ನಿರಂತರವಾಗಿ ಮಾಡಲಾಗುತ್ತಿದೆ. ಕೇವಲ ೨ ಪ್ಲ್ಯಾಟ್ ಫಾರ್ಮ್‌ವಿದ್ದ ರೈಲು ನಿಲ್ದಾಣ ಈಗ ೮ ಪ್ಲ್ಯಾಟ್ ಫಾರ್ಮ್ ಮಾಡಲಾಗಿದೆ. ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಎಕ್ಸ್‌ಲೆಟರ್ ಚಾಲನೆ ನೀಡಿದ ಪ್ರಹ್ಲಾದ ಜೋಶಿ ಹಾಗೂ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಅಕಾರಿಗಳು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಭಾರತ ಮಾತಾಕೀ ಜೈ, ಪ್ರಧಾನಿ ಮೋದಿ ಅವರಿಗೆ ಜೈವಾಗಲಿ ಎಂದು ಘೋಷಣೆ ಕೂಗಿದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಪಾಲಿಕೆಯ ಮೇಯರ್ ವೀಣಾ ಬರದ್ವಾಡ, ಪಾಲಿಕೆ ಸದಸ್ಯರಾದ ಸಂತೋಷ ಚವ್ಹಾಣ, ರಾಜಣ್ಣ ಕೊರವಿ, ಶಿವು ಮೆಣಸಿನಕಾಯಿ, ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಸಂಜೀವ ಕಿಶೋರ, ಡಿಆರ್ ಎಂ ಹರ್ಷ ಖರೆ, ವ್ಯಾಣಿಜ್ಯ ವಿಭಾಗಿಯ ವ್ಯವಸ್ಥಾಪಕಿ ಹರಿತಾ ಎಸ್., ಸಂತೋಷ ಹೆಗಡೆ ಇದ್ದರು.