ಬಿಜೆಪಿಯ ಡಬಲ್ ಎಂಜಿನ್ ಸರ್ಕಾರದಿಂದ ತೆಲಂಗಾಣದ ಅಭಿವೃದ್ಧಿ: ಬೃಹತ್ ರ್‍ಯಾಲಿಯಲ್ಲಿ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ತೆಲಂಗಾಣದಲ್ಲಿ ಬಿಜೆಪಿ ನೇತೃತ್ವದ ಡಬಲ್ ಎಂಜಿನ್ ಸರ್ಕಾರ ರಚನೆಯಾಗಲಿದೆ.ಇದರಿಂದ ತೆಲಂಗಾಣದ ಅಭಿವೃದ್ಧಿಗೆ ಮತ್ತಷ್ಟು ವೇಗ ಪಡೆದುಕೊಳ್ಳಲಿದೆ ಇದಕ್ಕೆ ನಿಮ್ಮಲ್ಲೆರ ಉತ್ಸಾಹವೇ ಸಾಕ್ಷಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಬಿಜೆಪಿ ಕಾರ್ಯಕಾರಣಿ ಸಭೆಯ ಬಳಿಕ ಹೈದರಾಬಾದ್‌ನಲ್ಲಿ ಆಯೋಜಿಸಿದ ಪ್ರಧಾನಿ ಮೋದಿ ರ್‍ಯಾಲಿಯಲ್ಲಿ ಮಾತನಾಡಿದ ಅವರು, ತೆಲಂಗಾಣ ಪ್ರಾಚೀನತೆ ಹಾಗೂ ಪರಾಕ್ರಮತೆಯ ಸ್ಥಳವಾಗಿದೆ. ಆಲಂಪುರ, ವರಾಂಗಲ್ ಭದ್ರಕಾಳಿ ಸೇರಿದಂತೆ ಹಲವು ಪವಿತ್ರ ಕ್ಷೇತ್ರ ಸ್ಥಳವಾಗಿದೆ. ವಿಶ್ವಪ್ರಸಿದ್ಧ ರಾಮಪ್ಪ ಮಂದಿರದ ಶಿಲ್ಪಕಲೆ ತೆಲಂಗಾಣದ ನಿಪುಣತೆಗೆ ಹಿಡಿದ ಕನ್ನಡಿಯಾಗಿದೆ ಎಂದು ಹೇಳಿದ್ದಾರೆ.

ತೆಲಂಗಾಣ ವಿಕಾಸಕ್ಕೆ ಬಿಜೆಪಿ ಬದ್ಧ. ತೆಲಂಗಾಣದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ನಿರಂತರ ಕೆಲಸ ಮಾಡುತ್ತಿದೆ. ಕಳೆದ 8 ವರ್ಷದಲ್ಲಿ ಭಾರತೀಯ ಜೀವನದಲ್ಲಿ ಸಕರಾತ್ಮ ಪರಿವರ್ತನೆ ಮಾಡಲು ಶ್ರಮಿಸಿದ್ದೇವೆ. ಪ್ರತಿಯೊಬ್ಬರನ್ನು ಭಾರತೀಯ ವಿಕಾಸದಲ್ಲಿ ಭಾಗಿದಾರರನ್ನಾಗಿ ಮಾಡಲಾಗಿದೆ. ಎಲ್ಲಾ ವರ್ಗದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಎಂದು ಮೋದಿ ಹೇಳಿದ್ದಾರೆ.

ಇಲ್ಲಿ ಸೇರಿರುವ ಜನಸ್ತೋಮ, ನಿಮ್ಮ ಪ್ರೀತಿ ನನ್ನ ಉತ್ಸಾಹ ಹೆಚ್ಚಿಸುತ್ತಿದೆ. ನನಗೆ ಯುವ ಸಮೂಹವೇ ಕಾಣುತ್ತಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ತೆಲಂಗಾಣ ಜನರು ಬಿಜೆಪಿಗೆ ಅಭೂತಪೂರ್ವ ಬೆಂಬಲ ನೀಡಿದ್ದೀರಿ. ಗ್ರೇಡರ್ ಹೈದರಾಬಾದ್ ಸ್ಥಳೀಯ ಚುನಾವಣೆಯಲ್ಲೂ ತೆಲಂಗಾಣ ಜನರು ಬಿಜೆಪಿ ಮೇಲೆ ವಿಶ್ವಾಸವಿಟ್ಟು ಬೆಂಬಲ ನೀಡಿದ್ದೀರಿ. ಇದೀಗ ತೆಲಂಗಾಣ ಜನರು ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಕ್ಕೆ ಆಗ್ರಹಿಸುತ್ತಿದ್ದಾರೆ. ಈ ಜನಸ್ತೋಮದಲ್ಲಿ ಉತ್ಸಾಹವನ್ನು ನಾನು ಗಮನಿಸುತ್ತಿದ್ದೇನೆ ಎಂದು ಮೋದಿ ಹೇಳಿದ್ದಾರೆ.

ಹೈದರಾಬಾದ್‌ನಲ್ಲಿ ಆಧುನಿಕ ಸೈನ್ಸ್ ಸಿಟಿ, ಬಯೋ ಮೆಡಿಕಲ್ ರಿಸರ್ಚ್ ಸೇರಿದಂತೆ ಹಲವು ಯೋಜನೆಗಳು ಬಿಜೆಪಿ ಜಾರಿ ಮಾಡಿದೆ. ನೂತನ ಶಿಕ್ಷಣ ನೀತಿಯಲ್ಲಿ ಸ್ಥಳೀಯ ಭಾಷೆಯಲ್ಲಿ ನೀಡಲಾಗುತ್ತದೆ. ತೆಲುಗು ಭಾಷೆಯಲ್ಲಿ ಇಲ್ಲಿನ ಮಕ್ಕಳಿಗೆ ಟೆಕ್ನಾಲಜಿ ಹಾಗೂ ಉನ್ನತ ವ್ಯಾಸಾಂಗ ಸಿಗಲಿದೆ ಎಂದು ಮೋದಿ ಹೇಳಿದ್ದಾರೆ.

ತೆಲಂಗಾಣ ಕೃಷಿ ಹಾಗೂ ರೈತರ ಜೀವನ ಸುಧಾರಣೆಗೆ ಕೇಂದ್ರ ಈಗಾಗಲೇ ಹಲವು ಯೋಜನೆ ಜಾರಿಗೊಳಿಸಿದೆ. ಧಾನ್ಯ ಖರೀದಿ, ರೈತರಿಗೆ ಬೆಂಬಲ ಬೆಲೆಗೆ ಈಗಾಗಲೇ ತೆಲಂಗಾಣ ಸರ್ಕಾರಕ್ಕೆ ಹಣ ಬಿಡುಗಡೆ ಮಾಡಲಾಗಿದೆ. ಹೈದರಾಬಾದ್‌ನಲ್ಲಿ 5 ಫ್ಲೈ ಓವರ್ ನಿರ್ಮಾಣಕ್ಕೆ ಕೇಂದ್ರ ಅನುಮೋದನೆ ನೀಡಿದೆ. ಇಷ್ಟೇ ಅಲ್ಲ ರಿಂಗ್ ರೋಡ್ ಕಾಮಕಾರಿ ಕೂಡ ಆರಂಭಿಸಲಾಗಿದೆ. ತೆಲಂಗಾಣದ ಹಳ್ಳಿ ಹಳ್ಳಿಗೂ ಸಂಪರ್ಕ ಕಲ್ಪಿಸಲು ಕೇಂದ್ರ ಸರ್ಕಾರ ಅವಿರತ ಪ್ರಯತ್ನ ಮಾಡುತ್ತಿದೆ. ಇದೀಗ 5,000 ಉದ್ದನೇಯ ರಾಷ್ಟ್ರೀಯ ಹೆದ್ದಾರಿಯನ್ನು ಕೇಂದ್ರ ಸರ್ಕಾರ ನಿರ್ಮಾಣ ಮಾಡಿದೆ ಎಂದು ಸಾದನೆಗಳನ್ನು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!