ಹೊಸದಿಗಂತ ವರದಿ ಬಳ್ಳಾರಿ:
ತಾಲ್ಲೂಕಿನ ದಾಸರ ನಾಗೇನಹಳ್ಳಿ ಗ್ರಾಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು, ಶುಕ್ರವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು. ಗ್ರಾಮದಲ್ಲಿ 40 ಲಕ್ಷ ರೂ.ವೆಚ್ಚದ ಸಿಸಿ ರಸ್ತೆ ಮತ್ತು ಒಳಚರಂಡಿ ಕಾಮಗಾರಿಗೆ ಚಾಲನೆ ನೀಡಿದರು.
ನಂತರ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಆಶ್ರಯದಲ್ಲಿ ನರೇಗಾ ಯೋಜನೆಯಡಿ ಉನ್ನತೀಕರಿಸಿದ ಕೂಸಿನ ಮನೆ ಉದ್ಘಾಟಿಸಿದರು. ನಂತರ ಅಲ್ಲಿನ ಮಕ್ಕಳಿಗೆ ಸಿಹಿ ತಿನಿಸಿ, ಮಕ್ಕಳೊಂದಿಗೆ ಸಚಿವರು ಸಂಭ್ರಮಿಸಿದರು. ನಂತರ ಗ್ರಾಮದಲ್ಲಿ ಸಚಿವರು ಸಂಚರಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರಿಂದ ಗ್ರಾಮದ ಮೂಲ ಸಮಸ್ಯೆಗಳನ್ನು ಸಚಿವರು ಆಲಿಸಿ, ಸೂಕ್ತ ಪರಿಹಾರ ಒದಗಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚಿಸಿದರು.
ಈ ಸಂದರ್ಭದಲ್ಲಿ ಜಿ. ಪಂ.ಸಿ ಇಓ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್, ಸಹಾಯಕ ಆಯುಕ್ತ ಹೇಮಂತ್.ಎನ್., ತಹಶೀಲ್ದಾರ ಗುರುರಾಜ, ತಾ.ಪಂ. ಇಓ ಮಡಗಿನ ಬಸಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು ಇತರರಿದ್ದರು.