ಹೊಸದಿಗಂತ ವರದಿ, ವಿಜಯಪುರ:
ರಾಜ್ಯ, ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯವೇ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲವು ಸಿಗುವಂತಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಸಂಸದ ರಮೇಶ ಜಿಗಜಿಣಗಿ ಅವರ ಅಭಿವೃದ್ಧಿ ಕೆಲಸಗಳು ಕೂಡ ಗೆಲುವಿಗೆ ಕಾರಣವಾಗಿವೆ. ಇದು ಮತದಾರರ ಆಶೀರ್ವಾದವಾಗಿದ್ದು, ಇನ್ನು ಮತದಾರರ ಒಲವು ಬಿಜೆಪಿ ಪರವಾಗಿ ಇದೆ ಎಂದರು.
ಪಕ್ಷದ ಗೆಲುವಿಗೆ ಕಾರ್ಯಕರ್ತರು ಸೇವೆ ಸಲ್ಲಿಸಿದ್ದಾರೆ. ಅದಕ್ಕಾಗಿ ಮತದಾರರು, ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.