ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈನ ಆಜಾದ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಭಾರತೀಯ ಜನತಾ ಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಫಡ್ನವೀಸ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಪ್ರಮುಖ ನಾಯಕರು ಉಪಸ್ಥಿತರಿದ್ದರು.
ಯೋಗಿ ಆದಿತ್ಯನಾಥ್ (ಉತ್ತರ ಪ್ರದೇಶ), ನಿತೀಶ್ ಕುಮಾರ್ (ಬಿಹಾರ), ವಿಷ್ಣು ದೇವ್ ಸಾಯಿ (ಛತ್ತೀಸ್‌ಗಢ), ಪ್ರಮೋದ್ ಸಾವಂತ್ (ಗೋವಾ), ಭೂಪೇಂದ್ರ ಪಟೇಲ್ (ಗುಜರಾತ್), ಮತ್ತು ಪುಷ್ಕರ್ ಸಿಂಗ್ ಧಾಮಿ (ಉತ್ತರಾಖಂಡ) ಮುಂತಾದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೂ ಇದ್ದರು.
ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಮತ್ತು ಬಾಲಿವುಡ್ ತಾರೆಯರಾದ ಶಾರುಖ್ ಖಾನ್, ಸಲ್ಮಾನ್ ಖಾನ್, ರಣವೀರ್ ಸಿಂಗ್, ಮತ್ತು ಮಾಧುರಿ ದೀಕ್ಷಿತ್ ಸೇರಿದಂತೆ ಪ್ರಮುಖರು ಕಾರ್ಯಕ್ರಮಕ್ಕೆ ಆಗಮಿಸಿದ್ದರು.