ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಟೋಕಿಯಾ ಪ್ಯಾರಾಲಂಪಿಕ್ಸ್ನಲ್ಲಿ ಭಾರತದ ಪದಕದ ಬೇಟೆ ಮುಂದುವರಿದಿದ್ದು, ಜಾವೆಲಿನ್ ಥ್ರೋನಲ್ಲಿ ದೇವೇಂದ್ರ ಜಜರಿಯಾ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ.
ಪುರುಷರ ಜಾವೆಲಿನ್ ಥ್ರೋನ ಎಫ್ 46 ಫೈನಲ್ ವಿಭಾಗದಲ್ಲಿ ದೇವೇಂದ್ರ 64.35 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ಎರಡನೇ ಸ್ಥಾನ ಪಡೆದು ಬೆಳ್ಳಿ ಪದಕ ಗೆದ್ದಿದ್ದಾರೆ.
ಇವರ ಬೆಳ್ಳಿ ಪದಕ ಸೇರಿ ಭಾರತ ಈವರೆಗೆ1 ಚಿನ್ನ, 4 ಬೆಳ್ಳಿ ಮತ್ತು 2 ಕಂಚಿನ ಪದಕ ಗಳಿಸಿದೆ.