August 25, 2026
Tuesday, August 25, 2026
spot_img

ರಾಯರ ದರುಶನಕ್ಕೆ ಹೊರಟಿದ್ದ ಚಿಕ್ಕಮಗಳೂರಿನ ಭಕ್ತರು ಸೇರಿದ್ದು ಮಸಣಕ್ಕೆ! ಭೀಕರ ಅಪಘಾತಕ್ಕೆ ಎಂಟು ಬಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಆಂಧ್ರಪ್ರದೇಶದ ಕರ್ನೂಲ್‌ ಜಿಲ್ಲೆಯ ಮಂತ್ರಾಲಯ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಚಿಕ್ಕಮಗಳೂರು ಮೂಲದ ಎಂಟು ಭಕ್ತರು ಮೃತಪಟ್ಟಿದ್ದಾರೆ.

ರಾಯರ ದರುಶನಕ್ಕೆಂದು ಬೊಲೆರೋ ವಾಹನದಲ್ಲಿ ಕುಟುಂಬದವರೆಲ್ಲ ಹೊರಟಿದ್ದರು. ಬೆಳಗಿನ ಜಾವ ನಾಲ್ಕು ಗಂಟೆ ವೇಳೆಗೆ ಸಿಮೆಂಟ್‌ ಟ್ಯಾಂಕರ್‌ ಡಿಕ್ಕಿ ಹೊಡೆದಿದೆ. ಬೊಲೆರೋ ವಾಹನದಲ್ಲಿದ್ದ 21 ಜನರ ಪೈಕಿ ಎಂಟು ಮಂದಿ ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು ಮೂಲದ ಅಮೃತ, ತೇಜಸ್ವಿನಿ, ಧನ್ಯ, ದೀಪಿಕ, ದೀಕ್ಷಿತ, ಪ್ರತಾಪ್, ಕುಮಾರ್, ಯಶೋದಮ್ಮ ಮೃತರು. ಮೂರು ವರ್ಷದ ಮಗು ಸೇರಿ ಐವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಡಿಕ್ಕಿಯಾದ ರಭಸಕ್ಕೆ ಬೊಲೆರೊ ವಾಹನ ಅಪ್ಪಚ್ಚಿಯಾಗಿದ್ದು, ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !