ಪಂಢರಾಪುರ ಪುಣ್ಯಕ್ಷೇತ್ರಕ್ಕೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಭಕ್ತರಿಗೆ ಕಾರ್ ಡಿಕ್ಕಿ, ಏಳು ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದ ಪಂಢರಾಪುರ ಕ್ಷೇತ್ರಕ್ಕೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದವರಿಗೆ ಕಾರು ಡಿಕ್ಕಿ ಹೊಡೆದಿದ್ದು, ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎಂಟು ಭಕ್ತರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುಂಪಿನಲ್ಲಿ ಭಕ್ತರು ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಕಾರ್ ಬಂದು ಡಿಕ್ಕಿ ಹೊಡೆದಿದೆ. ಐವರು ಮಹಿಳೆಯರು, ಮಗು ಸೇರಿ ಏಳು ಭಕ್ತರು ಮೃತಪಟ್ಟಿದ್ದಾರೆ. ಕಾರಿನಲ್ಲಿ ಇದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!