ಹೊಸದಿಗಂತ ಡಿಜಿಟಲ್ ಡೆಸ್ಕ್:
ಜ್ಞಾನಯೋಗಾಶ್ರಮದ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದು, ಅಂತಿಮ ದರ್ಶನಕ್ಕೆ ಸಾಗರೋಪಾದಿಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ.
ವಿಜಯಪುರದ ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ಏರ್ಪಾಡು ಮಾಡಿದ್ದು, ಮಧ್ಯಾಹ್ನ ಮೂರು ಗಂಟೆವರೆಗೆ ದರ್ಶನಕ್ಕೆ ಅವಕಾಶವಿದೆ. ಈ ಸ್ಥಳದಲ್ಲಿಯೇ ಭಕ್ತರಿಗೆ ಪ್ರಸಾದ ಹಾಗೂ ನೀರಿನ ವ್ಯವಸ್ಥೆ ಮಾಡಲಾಗಿದೆ. ಸಂಜೆ ಐದು ಗಂಟೆಗೆ ಸರಕಾರಿ ಗೌರವಗಳೊಂದಿಗೆ ಆಶ್ರಮದ ಆವರಣದಲ್ಲಿಯೇ ಅಂತ್ಯಕ್ರಿಯೆ ನೆರವೇರಲಿದೆ.
ಸಿಎಂ ಬೊಮ್ಮಾಯಿ ಸೇರಿದಂತೆ ವಿವಿಧ ಮಠಾಧೀಶರು, ಸಚಿವರು ಹಾಗೂ ಭಕ್ತರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಿದ್ದೇಶ್ವರ ಶ್ರೀಗಳ ಆಶಯದಂತೆ ದೇಹವನ್ನು ಅಗ್ನಿಗೆ ಅರ್ಪಿಸಲಾಗುವುದು, ಸ್ಮಾರಕ ನಿರ್ಮಾಣವೂ ಮಾಡಲಾಗುವುದಿಲ್ಲ.