Saturday, November 8, 2025

WEATHER | ರಾಜ್ಯದಲ್ಲಿ ಇಬ್ಬನಿ ಬೀಳೋಕೆ ಶುರುವಾಯ್ತು!  12 ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರ್ನಾಟಕದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದೆ. ಇಬ್ಬನಿ ಬೀಳುತ್ತಿದೆ. ಕೆಲವೇ ಕೆಲವು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಕಡೆ ಒಣಹವೆ ಇರಲಿದೆ.

ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಗದಗ, ಧಾರವಾಡದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ವಿಜಯನಗರದಲ್ಲಿ ಒಣಹವೆ ಇರಲಿದೆ. ಗದಗ, ರಾಯಲ್ಪಾಡು, ಅಣ್ಣಿಗೆರೆ, ಬೈಲಹೊಂಗಲ, ಬೆಂಗಳೂರು ಎಚ್​ಎಎಲ್​, ಕೋಲಾರ, ಕುರ್ಡಿ, ಕುಷ್ಟಗಿ, ಮಧುಗಿರಿ, ರಾಯಚೂರಿನಲ್ಲಿ ಮಳೆಯಾಗಿದೆ.

error: Content is protected !!