ಮೂತ್ರ ವಿಸರ್ಜನೆ ಪ್ರಕರಣ : ಏರ್ ಇಂಡಿಯಾಗೆ 30 ಲಕ್ಷ ದಂಡ, ಪೈಲಟ್ ಇನ್ ಕಮಾಂಡ್ 3 ತಿಂಗಳು ಅಮಾನತು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಪ್ಯಾರಿಸ್-ನವದೆಹಲಿ ವಿಮಾನದಲ್ಲಿ ನಡೆದ ಮೂತ್ರ ವಿಸರ್ಜನೆ ಘಟನೆಗೆ ಸಂಬಂಧಿಸಿದಂತೆ ಏರ್ ಇಂಡಿಯಾ ಏರ್‌ಲೈನ್‌ಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) 30 ಲಕ್ಷ ರೂಪಾಯಿ ದಂಡ ವಿಧಿಸಿದೆ.

ವಿಮಾನಯಾನ ನಿಯಂತ್ರಕವು ವಿಮಾನದ ಪೈಲಟ್-ಇನ್-ಕಮಾಂಡ್ ಪರವಾನಗಿಯನ್ನು ಮೂರು ತಿಂಗಳ ಅವಧಿಗೆ ಅಮಾನತುಗೊಳಿಸಿದೆ ಮತ್ತು ಏರ್ ಇಂಡಿಯಾದ ಇನ್-ಫ್ಲೈಟ್ ಸೇವೆಯ ನಿರ್ದೇಶಕರಿಗೆ 3 ಲಕ್ಷ ರೂಪಾಯಿ ದಂಡ ಹಾಕಿದೆ.

ಈ ಪ್ರಕರಣವು ನವೆಂಬರ್ 26, 2022 ರಿಂದ ನಡೆದಿದ್ದು, ಶಂಕರ್ ಮಿಶ್ರಾ ಎಂಬ ವ್ಯಕ್ತಿ ವಿಮಾನದ ಬಿಸಿನೆಸ್ ಕ್ಲಾಸ್‌ನಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜಿಸಿದ್ದಾನೆ. ಘಟನೆಯ ವೇಳೆ ಮಿಶ್ರಾ ಕುಡಿದಿದ್ದರು ಎನ್ನಲಾಗಿದೆ. ಸದ್ಯ ಶಂಕರ್ ಮಿಶ್ರಾ ಬಂಧನದಲ್ಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!