ನೂತನ ಸಿಬಿಐ ನಿರ್ದೇಶಕರಾಗಿ ಡಿಜಿಪಿ ಪ್ರವೀಣ್ ಸೂದ್ ನೇಮಕ

ಹೊಸದಿಗಂತ ಡಿಜಟಲ್‌ ಡೆಸ್ಕ್:‌

ರಾಜ್ಯ ಪೊಲೀಸ್ ಮಹಾನಿರ್ದೇಶಕ(ಡಿಜಿ ಮತ್ತು ಐಜಿಪಿ) ಪ್ರವೀಣ್ ಸೂದ್ ಅವರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಿ ಕೇಂದ್ರ ಸರ್ಕಾರ ನೇಮಿಸಿದೆ.

ಪ್ರಧಾನಿ ನರೇಂದ್ರ ಮೋದಿ, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನೊಳಗೊಂಡ ತ್ರಿಸದಸ್ಯ ನೇಮಕಾತಿ ಸಮಿತಿಯು ಅವರ ಹೆಸರನ್ನು ಅಂತಿಮಗೊಳಿಸಿದೆ.

ಸಿಬಿಐನ ಹಾಲಿ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಅವರ ಎರಡು ವರ್ಷಗಳ ಅಧಿಕಾರಾವಧಿ ಮೇ 25 ರಂದು ಕೊನೆಗೊಳ್ಳಲಿದ್ದು, ಇದೀಗ ಅವರ ಜಾಗಕ್ಕೆ ಪ್ರವೀಣ್ ಸೂದ್ ಅವರನ್ನು ನೇಮಕ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!