ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಅವರ ನೇತೃತ್ವದಲ್ಲಿ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ.
ಸರ್ಕಾರಿ ಕಚೇರಿಯಲ್ಲೇ ಡಿಜಿಪಿ ರಾಮಚಂದ್ರರಾವ್ ಮಹಿಳೆಯರೊಂದಿಗೆ ಸರಸವಾಡಿದ ವಿಡಿಯೊ ವೈರಲ್ ಆಗಿತ್ತು. ಹೀಗಾಗಿ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿತ್ತು. ಇದೀಗ ಪ್ರಕರಣದ ತನಿಖೆಗೆ ಆದೇಶಿಸಲಾಗಿದೆ.
ಘಟನೆ ಸತ್ಯಾಸತ್ಯತೆಗಾಗಿ ಡಿಜಿ ಮತ್ತು ಐಜಿಪಿಗೆ ಸರ್ಕಾರ ಸೂಚಿಸಿದ್ದರು. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಹಿತೇಂದ್ರ ನೇತೃತ್ವದಲ್ಲಿ ತನಿಖೆಗೆ ಡಿಜಿ ಮತ್ತು ಐಜಿಪಿ ಸೂಚನೆ ನೀಡಿದ್ದಾರೆ.


