May 31, 2026
Sunday, May 31, 2026
spot_img

ಡಿಜಿಪಿ ರಾಮಚಂದ್ರ ರಾವ್ ಅಮಾನತು ರದ್ದು: ಮತ್ತೆ ಸೇವೆಗೆ ನಿಯೋಜನೆಗೊಳಿಸಿದ ರಾಜ್ಯ ಸರ್ಕಾರ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರೀ ಸದ್ದು ಮಾಡಿದ್ದ ಹಿರಿಯ ಐಪಿಎಸ್ ಅಧಿಕಾರಿ ಡಾ. ಕೆ. ರಾಮಚಂದ್ರ ರಾವ್ ಅವರ ರಾಸಲೀಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಅಮಾನತುಗೊಂಡಿರುವ ಅಧಿಕಾರಿಯನ್ನು ಮತ್ತೆ ಸೇವೆಗೆ ನಿಯೋಜನೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಡಿಜಿಪಿ ದರ್ಜೆಯ ಅಧಿಕಾರಿಯಾಗಿದ್ದ ಕೆ. ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಮಹಿಳೆಯೊಬ್ಬರ ಜೊತೆ ಅಸಭ್ಯವಾಗಿ ವರ್ತಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಬೆನ್ನಲ್ಲೇ ರಾಜ್ಯ ಸರ್ಕಾರ, ಅವರನ್ನು ಸೇವೆಯಿಂದ ಅಮಾನತುಗೊಳಿಸಿತ್ತು. ಇದೀಗ ಅಮಾನತು ಆದೇಶವನ್ನು ವಾಪಸ್‌ ಪಡೆದಿದೆ.

ಡಾ. ಕೆ. ರಾಮಚಂದ್ರ ರಾವ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಗೆ ಮರುಸೇರ್ಪಡೆಗೊಳಿಸಲಾಗಿದ್ದು, ಡಿಜಿಪಿ ಪೊಲೀಸ್ ಮ್ಯಾನ್ಯುವಲ್ ಹುದ್ದೆಗೆ ನೇಮಿಸಲಾಗಿದೆ. ಇತ್ತ ಈ ತಿಂಗಳು 31 ರಂದು ಡಿಜಿಪಿ ರಾಮಚಂದ್ರ ರಾವ್ ಸೇವಾ ನಿವೃತ್ತಿ ಹೊಂದಲಿದ್ದಾರೆ. ಹೀಗಾಗಿ ಅಮಾನತು ಆದೇಶವನ್ನು ವಾಪಸ್‌ ಪಡೆಯಲಾಗಿದೆ ಎನ್ನಲಾಗುತ್ತಿದೆ. ಇದೀಗ ತನಿಖೆ ಪೂರ್ಣಗೊಳ್ಳುವ ಮೊದಲೇ ಸರಕಾರದ ಈ ನಿರ್ಧಾರ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !