ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ 8ನೇ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಸಂಸತ್ತಿನಲ್ಲಿ 2025ರ ಕೇಂದ್ರ ಬಜೆಟ್ ಮಂಡನೆ ಆರಂಭವಾಗಿದ್ದು, ಧನ ಧಾನ್ಯ ಯೋಜನೆ ಬಗ್ಗೆ ಸಚಿವೆ ಮಾತನಾಡಿದ್ದಾರೆ.
ನೂರು ಜಿಲ್ಲೆಗಳನ್ನು ಕೇಂದ್ರೀಕರಿಸಿ ಯೋಜನೆ. ಕೃಷಿ ಉತ್ಪನ್ನಗಳ ಬೆಳವಣಿಗೆ ಆದ್ಯತೆ. ನೀರಾವರಿ, ಹಾಗೂ ಸ್ಟೋರೆಜ್ ಗಳ ನಿರ್ಮಾಣ. ಇದರಿಂದ 1.7 ಕೋಟಿ ರೈತರಿಗೆ ಅನುಕೂಲವಾಗಲಿದೆ ಎಂದಿದ್ದಾರೆ.