ಕೊನೆಗೂ ಡಿವೋರ್ಸ್‌ ಬಗ್ಗೆ ಮೌನ ಮುರಿದ ಧನಶ್ರೀ, ನನ್ನ ಹೆಸರು ಹಾಳುಮಾಡಬೇಡಿ ಎಂದು ಮನವಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಟೀಮ್ ಇಂಡಿಯಾ ಆಟಗಾರ ಯುಜ್ವೇಂದ್ರ ಚಹಲ್ ಕಳೆದ ಕೆಲ ದಿನಗಳಿಂದ ಸುದ್ದಿಯಲ್ಲಿದ್ದಾರೆ. ಪತ್ನಿ ಧನಶ್ರೀ ವರ್ಮಾ ಅವರಿಂದ ಚಹಲ್ ವಿಚ್ಛೇದನ ಪಡೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.ಈ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಊಹಾಪೋಹ ಸುದ್ದಿಗಳು ಹರಿದಾಡುತ್ತಿವೆ. ಇದರ ಬಗ್ಗೆ ಧನಶ್ರೀ ಮಾತನಾಡಿದ್ದಾರೆ.

ಕಳೆದ ಹಲವು ದಿನಗಳಿಂದ ನಡೆಯುತ್ತಿರುವ ಊಹಾಪೋಹಗಳ ನಡುವೆ, ಜನವರಿ 8 ರಂದು, ಧನಶ್ರೀ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹೇಳಿಕೆಯನ್ನು ಹಂಚಿಕೊಂಡಿದ್ದಾರೆ. ನನಗೆ ಮತ್ತು ನನ್ನ ಕುಟುಂಬಕ್ಕೆ ಕಳೆದ ಕೆಲ ದಿನಗಳು ತುಂಬಾ ಕಠಿಣ ದಿನಗಳಾಗಿವೆ. ಆಧಾರರಹಿತ ಬರವಣಿಗೆ, ಸತ್ಯ-ಪರಿಶೋಧವಿಲ್ಲದ ಬರಹಗಳು ಮತ್ತು ದ್ವೇಷವನ್ನು ಹರಡುವ ಟ್ರೋಲ್‌ಗಳಿಂದ ನನ್ನ ಗೌರವವನ್ನು ಕೊಲ್ಲುವ ಪ್ರಯತ್ನ ಮಾಡುತ್ತಿದ್ದಾರೆ.

ಈ ಹೆಸರುಗಳಿಸಲು ಮತ್ತು ಖ್ಯಾತಿಯನ್ನು ಪಡೆಯಲು ನಾನು ಹಲವು ವರ್ಷಗಳಿಂದ ಶ್ರಮಿಸಿದ್ದೇನೆ. ನನ್ನ ಮೌನ ನನ್ನ ದೌರ್ಬಲ್ಯವಲ್ಲ. ಅದು ನನ್ನ ಶಕ್ತಿ. ನಕಾರಾತ್ಮಕತೆಯು ಆನ್‌ಲೈನ್‌ನಲ್ಲಿ ಸುಲಭವಾಗಿ ಹರಡುತ್ತದೆ. ಇದು ಇತರರನ್ನು ಮೇಲಕ್ಕೆತ್ತಲು ಧೈರ್ಯ ನೀಡುತ್ತದೆ.

ನಾನು ನನ್ನ ಸತ್ಯದ ಮೇಲೆ ಕೇಂದ್ರೀಕರಿಸಲು ಮತ್ತು ನನ್ನ ಮೌಲ್ಯಗಳನ್ನು ಹಿಡಿದಿಟ್ಟುಕೊಂಡು ಮುಂದುವರಿಯುವುದನ್ನು ಆಯ್ಕೆ ಮಾಡುತ್ತೇನೆ. ಯಾವುದೇ ಪುರಾವೆಗಳಿಲ್ಲದಿದ್ದರೂ ಸತ್ಯವು ಅದರ ಸ್ಥಾನದಲ್ಲಿ ದೃಢವಾಗಿ ನಿಂತಿದೆ. ಓಂ ನಮಃ ಶಿವಾಯ… ಎಂದು ಧನಶ್ರೀ ವರ್ಮಾ ಬರೆದುಕೊಂಡಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!