ಧನುಷ್-ಐಶ್ವರ್ಯ ರಜನಿಕಾಂತ್ ಡಿವೋರ್ಸ್: ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ನೊಟೀಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಧನುಷ್ ಮತ್ತು ಐಶ್ವರ್ಯ ರಜನಿಕಾಂತ್  ಡಿವೋಸ್  ಕುರಿತು  ಚೆನ್ನೈನ ಕೌಟುಂಬಿಕ ನ್ಯಾಯಾಲಯ ವಿಚಾರಣೆಗೆ ಹಾಜರಾಗುವಂತೆ ಇಬ್ಬರಿಗೆ ನೊಟೀಸ್ (Notice) ನೀಡಿದೆ. ಅಕ್ಟೋಬರ್ 7ರಂದು ಇಬ್ಬರೂ ನ್ಯಾಯಾಲಯಕ್ಕೆ ಬರಬೇಕು ಎಂದು ನೊಟೀಸ್ ನಲ್ಲಿ ತಿಳಿಸಿದೆ.

ಜನವರಿ 2022 ರಂದು ತಾವಿಬ್ಬರೂ ದೂರ ಆಗುತ್ತಿರುವ ವಿಷಯವನ್ನು ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದರು ಐಶ್ವರ್ಯ ರಜನಿಕಾಂತ್ (Aishwarya Rajinikanth). ಆ ನಂತರ ಅದನ್ನು ನಟ ಧನುಷ್ (Dhanush) ಕೂಡ ಖಚಿತ ಪಡಿಸಿದ್ದರು. ಅದಾದ ನಂತರ ಇಬ್ಬರನ್ನೂ ಒಟ್ಟಾಗಿಸುವ ಪ್ರಯತ್ನ ನಡೆಯಿತು. ಸ್ವತಃ ರಜನಿಕಾಂತ್ ಅವರೇ ಇಬ್ಬರೊಂದಿಗೂ ಮಾತನಾಡಿದ್ದರು. ಆದರೆ, ಪ್ರಯತ್ನ ವಿಫಲವಾಗಿತ್ತು.

ಜನವರಿ 2022ರಲ್ಲೇ ಘೋಷಿಸಿದ್ದು ಈಗ ಕೋರ್ಟ್ (Court) ಮೆಟ್ಟಿಲು ಏರಿದೆ. ಚೆನ್ನೈನ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನ (Divorce) ಅರ್ಜಿ ಸಲ್ಲಿಸಿದ್ದಾರೆ ಎಂದು ಆಪ್ತರು ಖಚಿತ ಪಡಿಸಿದ್ದರು ಎಂದು ಆಗ್ಲಂ ವೆಬ್ ಸೈಟ್ ವೊಂದು ವರದಿ ಮಾಡಿತ್ತು.

ಪರಸ್ಪರ ಪ್ರೀತಿಸಿ ಮದುವೆಯಾದ ಈ ಜೋಡಿಗೆ 18 ವರ್ಷಗಳ ನೆನಪುಗಳಿವೆ. ಲಿಂಗ ಮತ್ತು ಯಾತ್ರಾ ಹೆಸರಿನ ಇಬ್ಬರು ಪುತ್ರರೂ ಇದ್ದಾರೆ. ಐಶ್ವರ್ಯ ನಿರ್ದೇಶಕಿಯಾಗಿ ಹಲವಾರು ಚಿತ್ರಗಳನ್ನು ಮಾಡಿದ್ದರೆ, ಧನುಷ್ ನಟನಾಗಿ, ನಿರ್ಮಾಪಕನಾಗಿ, ನಿರ್ದೇಶಕನಾಗಿ ಸಾಕಷ್ಟು ಹೆಸರು ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!