ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ದಿಗಂತ ವರದಿ ಅಂಕೋಲಾ:
ಕೆ.ಪಿ.ಎಸ್.ಸಿ 2019-20 ರ ಸಾಲಿನ ಪರೀಕ್ಷೆಯಲ್ಲಿ ಉನ್ನತ ಸ್ಥಾನ ಪಡೆಯುವ ಮೂಲಕ ಉತ್ತೀರ್ಣರಾಗುವ ಮೂಲಕ ಸಾಧನೆ ಮಾಡಿದ ಅಂಕೋಲಾ ತಾಲೂಕಿನ ವಾಸರಕುದ್ರಿಗೆ ಗ್ರಾಮದ ಧನ್ಯಾ ನೀಲಕಂಠ ನಾಯಕ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಡಿ.ವೈ.ಎಸ್. ಪಿ ಯನ್ನಾಗಿ ನೇಮಕ ಮಾಡಲಾಗಿದೆ.
ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿ ತರಬೇತಿ ಕೇಂದ್ರದಲ್ಲಿ ಒಂದು ವರ್ಷ ನಡೆದ ತರಬೇತಿಯ ಅವದಿಯಲ್ಲಿ ಎಲ್ಲಾ ವಿಭಾಗಗಳಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಂದ ಸರ್ವೋತ್ತಮ ಪ್ರಶಸ್ತಿ ಪಡೆದ ಧನ್ಯಾ ನಾಯಕ ಜುಲೈ 19 ರಂದು ಮಂಗಳೂರು ಡಿ.ವೈ.ಎಸ್. ಪಿ ಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.