‘ವೀರ ಕಂಬಳ’ ಸಿನಿಮಾದಲ್ಲಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ನಟನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ‌ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಎಸ್.ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ವೀರ ಕಂಬಳ’ ಎಂಬ ಸಿನಿಮಾದಲ್ಲಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಡಾ. ಡಿ ವೀರೇಂದ್ರ ಹೆಗ್ಗಡೆಯವರು ಅತಿಥಿ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಅವರು ಚಿತ್ರಕ್ಕೆ ಬಣ್ಣ ಹಚ್ಚುತ್ತಿರುವ ಫೋಟೋ ಫುಲ್ ವೈರಲ್ ಆಗಿದೆ.

ಸುಮಾರು 7 ವರ್ಷಗಳ ಕಾಲ ಸಂಶೋಧನೆ ನಡೆಸಿ ನಿರ್ಮಿಸಲಾಗುತ್ತಿರುವ ವೀರ ಕಂಬಳ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದ್ದು, ಕಂಬಳವನ್ನೇ ಕೇಂದ್ರವನ್ನಾಗಿಟ್ಟುಕೊಂಡು ಸಿನಿಮಾ ತಯಾರಾಗುತ್ತಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು, ಹಿಂದಿ ಹಾಗೂ ತುಳು ಭಾಷೆಗಳಲ್ಲಿಯೂ ತೆರೆಗೆ ಬರಲಿದೆ. ತುಳು ಭಾಷೆಯಲ್ಲಿ ‘ಬಿರ್ದ್‌ದ ಕಂಬಳ’ ಹೆಸರಿನಲ್ಲಿ ಚಿತ್ರ ಮೂಡಿ ಬರಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!