Monday, November 24, 2025

ಧರ್ಮಸ್ಥಳ ಬುರುಡೆ ಪ್ರಕರಣ: ಆರೋಪಿ ಚಿನ್ನಯ್ಯಗೆ ಜಾಮೀನು ಮಂಜೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಧರ್ಮಸ್ಥಳ ಬುರುಡೆ ಪ್ರಕರಣದ ಪ್ರಮುಖ ಆರೋಪಿ ಚಿನ್ನಯ್ಯನಿಗೆ ಜಾಮೀನು ಮಂಜೂರು ಮಾಡಲಾಗಿದೆ.  ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಲಾಗಿದೆ.

ಎಸ್‌ಐಟಿ ತಂಡ ಇತ್ತೀಚೆಗೆ ಬೆಳ್ತಂಗಡಿ ನ್ಯಾಯಾಲದಲ್ಲಿ ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಮಧ್ಯಂತರ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ಮಧ್ಯಂತರ ಚಾರ್ಜ್ ಶೀಟ್ ಸಲ್ಲಿಕೆ ಬೆನ್ನಲ್ಲೇ ಜಿಲ್ಲಾ ಕೋರ್ಟ್ ನಲ್ಲಿ ಚಿನ್ನಯ್ಯ ಪರ ವಕೀರಲು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಜಾಮೀನು ವೇಳೆ ಬರೋಬ್ಬರಿ 12 ಷರತ್ತು ಹಾಗೂ 1 ಲಕ್ಷ ರೂಪಾಯಿ ಬಾಂಡ್ ವಿಧಿಸಿ ಜಾಮೀನು ನೀಡಲಾಗಿದೆ.

ಎಸ್‌ಐಟಿ ತಂಡ ಆಗಾಗಲೇ ಚಾರ್ಜ್‌ಶೀಟ್ ಸಲ್ಲಿಸಿದೆ. ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದಲ್ಲಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿ ವಾದ ಮಂಡನೆ ನಡೆಯುತ್ತಿದೆ. ಇದರ ಬೆನ್ನಲ್ಲೇ ಜಾಮೀನು ಮಂಜೂರು ಆಗಿದೆ.

error: Content is protected !!