Tuesday, October 28, 2025

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ಸೇರಿ ನಾಲ್ವರಿಗೆ SIT ನೋಟಿಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ, 04/07/2025 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಕುರಿತಂತೆ ವಿಚಾರಣೆಗೆ ಹಾಜರಾಗಲು ಸೌಜನ್ಯ ಪರ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ. ಹಾಗೂ ವಿಠಲ ಗೌಡ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಈ ನಾಲ್ವರು ಅಕ್ಟೋಬರ್ 27, 2025 ರಂದು ಸೋಮವಾರ ಬೆಳಿಗ್ಗೆ 10.30ಕ್ಕೆ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಹಾಜರಾಗಿ ಸಾಕ್ಷಿ ಹಾಗೂ ದಾಖಲೆಗಳನ್ನು ಹಾಜರು ಪಡಿಸಲು ಎಸ್ಐಟಿ ತನಿಖಾಧಿಕಾರಿ ಜಿತೇಂದ್ರ ದಯಾಮಾ ನೋಟೀಸ್ ನಲ್ಲಿ ಸೂಚಿಸಿದ್ದಾರೆ.

ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ ಕಲಂ 35(3)ರ ಅಡಿಯಲ್ಲಿ ಈ ನೋಟಿಸ್ ನೀಡಿದ್ದು, ನಿಗದಿತ ಸಮಯದಲ್ಲಿ ವಿಚಾರಣೆಗೆ ಹಾಜರಾಗದಿದ್ದರೆ ಕಲಂ 35(6) ಅಡಿಯಲ್ಲಿ ಬಂಧನ ಕ್ರಮ ಕೈಗೊಳ್ಳಲಾಗುವುದು ಎಂದು ಕೂಡಾ ನೋಟಿಸ್ ನಲ್ಲಿ ಎಚ್ಚರಿಸಲಾಗಿದೆ.

error: Content is protected !!