ಹೊಸದಿಗಂತ ಡಿಜಿಟಲ್ ಡೆಸ್ಕ್:
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧದ ಪ್ರಕರಣಕ್ಕೆ ಸಂಬಂಧಿಸಿ ಯೂಟ್ಯೂಬರ್ ಸಮೀರ್‌ನ ಬೆಂಗಳೂರಿನ ನಿವಾಸದಲ್ಲಿ ಬೆಳ್ತಂಗಡಿ ಠಾಣೆ ಪೊಲೀಸರು ಇಂದು ಶೋಧ ನಡೆಸಿದ್ದಾರೆ.
ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದ ಪೊಲೀಸರು ವಿಧಿ ವಿಜ್ಞಾನ ಪ್ರಯೋಗಾಲಯದ ಸೋಕೊ ಸಿಬ್ಬಂದಿ ಜೊತೆ ಬೆಂಗಳೂರಿನ ಬನ್ನೇರುಘಟ್ಟದ ಹುಳ್ಳಹಲ್ಲಿಯಲ್ಲಿರುವ ಬಾಡಿಗೆ ಮನೆಗೆ ಇಂದು ತೆರಳಿದ್ದು, ಅಲ್ಲಿ ಸಮೀರ್ ವಿಡಿಯೋ ತಯಾರಿಸುತ್ತಿದ್ದ ಸ್ಥಳದಲ್ಲೂ ಶೋಧ ನಡೆಸಿದ್ದಾರೆ. ಪೊಲೀಸರ ಆಗಮನದ ವೇಳೆ ಸಮೀರ್ ಮನೆಯಲ್ಲಿಯೇ ಇದ್ದು, ವಿಚಾರಣೆಗೆ ಸಹಕಾರ ನೀಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಕರಣಕ್ಕೆ ಸಂಬಂಧಿಸಿ ವಿಡಿಯೋ ತಯಾರಿಗೆ ಬಳಸಿದ ಕಂಪ್ಯೂಟರ್, ಹಾರ್ಡ್ ಡಿಸ್ಕ್ ಸಹಿತ ವಿವಿಧ ಸಾಧನಗಳನ್ನು ಪೊಲೀಸರು ವಶಕ್ಕೆ ಪಡೆಯುವ ಸಾಧ್ಯತೆ ಇದೆ.
ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಮೀರ್‌ನ ಬೆಂಗಳೂರು ಮನೆಗೆ ಬೆಳ್ತಂಗಡಿ ಪೊಲೀಸ್ ಟೀಮ್!
