May 30, 2026
Saturday, May 30, 2026
spot_img

ಧರ್ಮಸ್ಥಳ ಪ್ರಕರಣ: ಎಸ್ಐಟಿ ಕಚೇರಿಗೆ ಗಿರೀಶ್ ಮಟ್ಟಣ್ಣನವರ್ ಹಾಜರು, ಮೊಬೈಲ್ ಸ್ವಾಧೀನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಧರ್ಮಸ್ಥಳ ಪ್ರಕರಣ ಸಂಬಂಧ ವಿಚಾರಣೆಗಾಗಿ ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಇಂದು ಬೆಳ್ತಂಗಡಿ ಠಾಣೆಗೆ ಹಾಜರಾಗಿದ್ದಾರೆ.

ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಬೆಳಗ್ಗೆ 11 ಗಂಟೆಗೆ ಹಾಜರಾದ ಅವರು, ಅಧಿಕಾರಿಗಳ ವಿಚಾರಣೆ ಎದುರಿಸಿದರು.

ಇದನ್ನೂ ಓದಿ:

ಪ್ರಕರಣದಲ್ಲಿ ಹಳೆಯ ಆಂಡ್ರಾಯ್ಡ್ ಮೊಬೈಲ್ ಉಪಯೋಗಿಸಿದ್ದನ್ನು ತನಿಖೆಗಾಗಿ ಎಸ್ಐಟಿ ಗೆ ನೀಡಲು ಅವರಿಗೆ ನೋಟೀಸ್ ಜಾರಿ ಮಾಡಲಾಗಿತ್ತು. ಅದರಂತೆ ಎಸ್ಐಟಿ ಕಚೇರಿಗೆ ಹಾಜರಾಗಿರುವ ಗಿರೀಶ್ ಮಟ್ಟಣ್ಣನವರ್ ಮೊಬೈಲ್ ಅನ್ನು ಎಸ್ ಐ.ಟಿ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.

ವಿಚಾರಣೆ ಬಳಿಕ ಗಿರೀಶ್ ಮಟ್ಟಣ್ಣವರ್ ವಾಪಸ್ 12:50 ಕ್ಕೆ ತೆರಳಿದ್ದಾರೆ ಎಂದು ಎಸ್ಐಟಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !