March 13, 2026
Friday, March 13, 2026
spot_img

ಧರ್ಮಸ್ಥಳ ಪ್ರಕರಣ: ನ್ಯಾಯಾಲಯಕ್ಕೆ ಪತ್ನಿ ಜೊತೆ ಹಾಜರಾದ ಮಾಸ್ಕ್ ಮ್ಯಾನ್ ಚಿನ್ನಯ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತುಹಾಕಿರುವ ಬಗ್ಗೆ ಸಾಕ್ಷಿ ದೂರುದಾರನಾಗಿ ಬಂದು ಜೈಲು ಸೇರಿ ಇದೀಗ ಜಾಮೀನಿನ ಮೇಲೆ ಹೊರ ಬಂದಿರುವ ಚಿನ್ನಯ್ಯ ಹಾಗೂ ಆತನ ಪತ್ನಿ ಗುರುವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಎಸ್‌ಐಟಿ ವರದಿ ವಿಚಾರಣೆ ಹಿನ್ನೆಲೆಯಲ್ಲಿ ಧರ್ಮಸ್ಥಳದವರು ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯ ಹಿನ್ನೆಲೆಯಲ್ಲಿ ಅವರನ್ನು ಪ್ರಕರಣದಲ್ಲಿ ಭಾಗಿಗಳಾಗಲು ಅವಕಾಶ ನೀಡುವುದಕ್ಕೆ ತಮ್ಮ ಆಕ್ಷೇಪಣೆ ಇಲ್ಲ ಎಂದು ನ್ಯಾಯಾಲಯದ ಮುಂದೆ ಚಿನ್ನಯ್ಯನ ಪರ ವಕೀಲರು ತಿಳಿಸಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !