ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತುಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿರುವ ದೂರುದಾರ ಚಿನ್ನಯ್ಯನ ಜಾಮೀನು ಅರ್ಜಿಯನ್ನು ಬೆಳ್ತಂಗಡಿ ಕೋರ್ಟ್ ವಜಾ ಮಾಡಿದೆ.
ಚಿನ್ನಯ್ಯ ಪರವಾಗಿ ಜಿಲ್ಲಾ ಕಾನೂನು ಪ್ರಾಧಿಕಾರದ ವಕೀಲರು ಜಾಮೀನು ಅರ್ಜಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದರು. ಆದರೆ ಜಾಮೀನು ನೀಡದಂತೆ ಎಸ್ಐಟಿ ಪರ ವಕೀಲರು ಆಕ್ಷೇಪಣೆ ಸಲ್ಲಿಕೆ ಮಾಡಿದ್ದರು.
ಈ ಸಂಬಂಧ ಸೆ. 12ರಂದು ಎರಡೂ ಕಡೆಯ ವಾದ ಆಲಿಸಿದ ನ್ಯಾಯಾಧೀಶರು ಇಂದಿಗೆ ಆದೇಶ ಕಾಯ್ದಿರಿಸಿದ್ದರು. ಇಂದು ಮತ್ತೆ ಎರಡೂ ಕಡೆಯ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ವಿಜಯೇಂದ್ರ ಅವರು ಅರ್ಜಿ ವಜಾ ಮಾಡಿದ್ದಾರೆ.