Friday, September 5, 2025

ಧರ್ಮಸ್ಥಳ ಪ್ರಕರಣ: ‘ಬುರುಡೆ’ ವಿಡಿಯೋ ಪ್ರಸಾರ ಮಾಡಿದ ಕೇರಳದ ಯೂಟ್ಯೂಬರ್‌ಗೆ ಎಸ್‌ಐಟಿ ನೋಟೀಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಐಟಿ ತನಿಖೆ ಈಗ ಕೇರಳಕ್ಕೂ ವಿಸ್ತರಿಸಿದ್ದು, ‘ತಲೆ ಬುರುಡೆ’ ತೆಗೆಯುವ ವಿಡಿಯೋವನ್ನು ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿ ಕೇರಳ ಮೂಲದ ಯೂಟ್ಯೂಬರ್ ಮನಾಫ್ ಎಂಬಾತನಿಗೆ ನೋಟೀಸ್ ಜಾರಿ ಮಾಡಲಾಗಿದೆ.

ಮನಾಫ್, ಧರ್ಮಸ್ಥಳ ಪ್ರಕರಣ ತನಿಖೆಗೆ ಎಸ್‌ಐಟಿ ರಚನೆಯಾಗುವ ಮುನ್ನವೇ ಕೇರಳದಿಂದ ಧರ್ಮಸ್ಥಳಕ್ಕೆ ಆಗಮಿಸಿ ಹಲವು ವೀಡಿಯೊಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ ಎಂಬ ಆರೋಪವಿದೆ. ಜೊತೆಗೆ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ತಲೆ ಬುರುಡೆ ಚೀಲಕ್ಕೆ ತುಂಬುವ ವಿಡಿಯೋವನ್ನು ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಿ ಕೇರಳದಲ್ಲೂ ಚರ್ಚೆಗೆ ಕಾರಣವಾಗಿದ್ದ. ಇವೆಲ್ಲವುಗಳ ವಿಚಾರಣೆಗಾಗಿ ಖುದ್ದು ಹಾಜರಾಗುವಂತೆ ಮನಾಫ್‌ಗೆ ಈಗ ಎಸ್‌ಐಟಿ ನೋಟಿಸ್ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ