ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಕೇಸ್‌: ಶವಗಳ ಹೂತಿದ್ದ ಜಾಗ ತೋರಿಸಿದ ದೂರುದಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು ಹೂತಿದ್ದ 13 ಸ್ಥಳಗಳನ್ನು ಅಧಿಕಾರಿಗಳಿಗೆ ತೋರಿಸಿದ್ದಾನೆಂದು ತಿಳಿದುಬಂದಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಸೋಮವಾರ ತನಿಖೆಯನ್ನು ಚುರುಕುಗೊಳಿಸಿದ್ದು, ಶವಗಳನ್ನು ಹೂಳಲಾಗಿದೆ ಎಂಬ ಸಾಕ್ಷಿ-ದೂರುದಾರನ ಹೇಳಿಕೆ ಅನ್ವಯ ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಸೋಮವಾರ ಪರಿಶೀಲನೆ ನಡೆಸಿತು.

ಸಾಕ್ಷಿ-ದೂರುದಾರರು ಸೋಮವಾರ ಬೆಳಿಗ್ಗೆ 11.30 ರ ಸುಮಾರಿಗೆ ಕಾನೂನು ಸಲಹೆಗಾರರೊಂದಿಗೆ ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಗೆ ಮುಸುಕುಧಾರಿ ವ್ಯಕ್ತಿಯಾಗಿ ಆಗಮಿಸಿದರು.

ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರು, ಒಂದು ಗಂಟೆ ವಿಚಾರಣೆ ನಡೆಸಿ ಕೆಲವು ದಾಖಲಾತಿ ಕಾರ್ಯಗಳನ್ನು ಪೂರ್ಣಗೊಳಿಸಿದ ನಂತರ, ಸಾಕ್ಷಿ-ದೂರುದಾರ ವ್ಯಕ್ತಿಯನ್ನು ಮೊದಲಿಗೆ ನೇತ್ರಾವತಿ ಸ್ನಾನಘಟ್ಟ ಪ್ರದೇಶಕ್ಕೆ ಕರೆದೊಯ್ದರು, ಅಲ್ಲಿ ವ್ಯಕ್ತಿ ಪ್ರಕರಣಕ್ಕೆ ಸಂಬಂಧಿಸಿದ ಸ್ಥಳವನ್ನು ತೋರಿಸಿದರು.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!