August 19, 2026
Wednesday, August 19, 2026
spot_img

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ತಡವಾದ ನಿರ್ಧಾರ: ಪ್ರಿಯಾಂಕ್ ಖರ್ಗೆ ಟೀಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರ ಸರ್ಕಾರ ತಡವಾಗಿ ಕ್ರಮ ಕೈಗೊಂಡಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದು ಸ್ವಾಗತಾರ್ಹವಾದರೂ, ಈ ನಿರ್ಧಾರ ಬಹಳ ತಡವಾಗಿ ಬಂದಿದೆ ಎಂದು ಅವರು ಅಭಿಪ್ರಾಯಪಟ್ಟರು.

ವಿದ್ಯಾರ್ಥಿಗಳ ಭವಿಷ್ಯಕ್ಕೆ ಹೊಡೆತ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಿಂದ ಸಾವಿರಾರು ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಯೋಜನೆಗೆ ತೊಂದರೆಯಾಗಿದೆ. ಹಲವರು ವೈದ್ಯಕೀಯ ಶಿಕ್ಷಣದ ಕನಸನ್ನು ಬಿಟ್ಟು ಬೇರೆ ಕೋರ್ಸ್‌ಗಳತ್ತ ಮುಖ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು ಎಂದು ಖರ್ಗೆ ಹೇಳಿದರು.

ಇದನ್ನೂ ಓದಿ:

ಕೇಂದ್ರ ಸರ್ಕಾರಕ್ಕೆ ಪ್ರಶ್ನೆಗಳ ಸುರಿಮಳೆ

ವಿದ್ಯಾರ್ಥಿಗಳ ಪ್ರತಿಭಟನೆ, ಆತ್ಮಹತ್ಯೆ ಪ್ರಕರಣಗಳು ಮತ್ತು ಸಾರ್ವಜನಿಕರ ಆಕ್ರೋಶದ ಬಳಿಕವೇ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಅವರು ಆರೋಪಿಸಿದರು. ಜೊತೆಗೆ, ಈ ಪ್ರಕರಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.

ಯುವಕರ ಹೋರಾಟಕ್ಕೆ ಅಭಿನಂದನೆ

ಪ್ರಜಾಪ್ರಭುತ್ವದಲ್ಲಿ ಜನರ ಧ್ವನಿಗೆ ಮಹತ್ವವಿದ್ದು, ಶಾಂತಿಯುತವಾಗಿ ಹೋರಾಟ ನಡೆಸಿದ ವಿದ್ಯಾರ್ಥಿ-ಯುವಜನರನ್ನು ಅಭಿನಂದಿಸುತ್ತೇನೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !