July 25, 2026
Saturday, July 25, 2026
spot_img

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸಾಲದು: ಪ್ರಧಾನಿ ಕ್ಷಮೆಯಾಚನೆಗೆ ರಾಹುಲ್ ಗಾಂಧಿ ಪಟ್ಟು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರ ರಾಜೀನಾಮೆಯು ಶಿಕ್ಷಣ ಕ್ಷೇತ್ರದ ಸುಧಾರಣೆಗೆ ತಲುಪಿದ ಮೊದಲ ಯಶಸ್ಸು. ಆದರೆ, ಇಷ್ಟಕ್ಕೇ ಹೋರಾಟ ಮುಗಿಯುವುದಿಲ್ಲ. ದೇಶದ ವಿದ್ಯಾರ್ಥಿ ಸಮುದಾಯಕ್ಕೆ ನ್ಯಾಯ ಸಿಗಲು ಇನ್ನುಳಿದ ಎರಡು ಪ್ರಮುಖ ಬೇಡಿಕೆಗಳನ್ನು ಕೇಂದ್ರ ಸರ್ಕಾರ ತಕ್ಷಣವೇ ಈಡೇರಿಸಬೇಕು ಎಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಕಟ್ಟುನಿಟ್ಟಿನ ಆಗ್ರಹ ಮಾಡಿದ್ದಾರೆ.

ಪ್ರಧಾನಿ ಮೋದಿ ಕ್ಷಮೆಯಾಚಿಸಲಿ

ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ಹಂಚಿಕೊಂಡಿರುವ ವಿಶೇಷ ವಿಡಿಯೋ ಸಂದೇಶದಲ್ಲಿ ಮಾತನಾಡಿದ ಅವರು, ಯುವಜನರ ಧ್ವನಿಯನ್ನು ಹತೋಟಿ ಮಾಡಲು ಯತ್ನಿಸಿದ ಪ್ರಧಾನಿ ನರೇಂದ್ರ ಮೋದಿಯವರು ವಿದ್ಯಾರ್ಥಿಗಳ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ. ಜತೆಗೆ, ತಮ್ಮ ಹಕ್ಕುಗಳಿಗಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಅಮಾಯಕ ಯುವಕರ ಮೇಲೆ ದೌರ್ಜನ್ಯ ಎಸಗಿದ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿವು

ರಸ್ತೆಗಿಳಿದು ಪ್ರಜಾಪ್ರಭುತ್ವ, ಸಂವಿಧಾನ ಮತ್ತು ತಮ್ಮ ಭವಿಷ್ಯದ ರಕ್ಷಣೆಗಾಗಿ ಹೋರಾಡುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಯ ಬಗ್ಗೆಯೂ ಹೆಮ್ಮೆಯಿದೆ ಎಂದು ರಾಹುಲ್ ಶ್ಲಾಘಿಸಿದ್ದಾರೆ. ರೈತರು, ಕಾರ್ಮಿಕರು, ಬಡವರು ಹಾಗೂ ಈ ಆಡಳಿತದ ದಬ್ಬಾಳಿಕೆಗೆ ಒಳಗಾದ ಪ್ರತಿಯೊಬ್ಬ ನಾಗರಿಕನೂ ಒಗ್ಗೂಡಿ ನಿಲ್ಲುವುದೇ ನಿಜವಾದ ಧೈರ್ಯ ಎಂದಿದ್ದಾರೆ. ಯುವಜನರು ಯಾವುದೇ ಕಾರಣಕ್ಕೂ ಭಯಪಡಬಾರದು, ಪ್ರಸ್ತುತ ಆಡಳಿತವನ್ನು ಅಧಿಕಾರದಿಂದ ಕೆಳಗಿಳಿಸುವ ಸಮಯ ಹತ್ತಿರ ಬಂದಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !