ಹೊಸದಿಗಂತ ವರದಿ, ಧಾರವಾಡ:
ಜಿಲ್ಲೆಯಲ್ಲಿ ಆಯೋಜಿಸಿದ ಬೃಹತ್ ಲಸಿಕಾ ಅಭಿಯಾನಕ್ಕೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಶುಕ್ರವಾರ ಚಾಲನೆ ನೀಡಿದರು.
ಲಸಿಕಾ ಅಭಿಯಾನಕ್ಕೆ ಸಿಬ್ಬಂದಿ ಹಾಗೂ ಸಂಚಾರಿ ಲಸಿಕಾ ವಾಹನಗಳಿಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ಮುಂಭಾಗದಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುಶೀಲಾ ಬಿ., ಉಪವಿಭಾಗಾಧಿಕಾರಿ ಡಾ.ಗೋಪಾಲ ಕೃಷ್ಣ ಬಿ., ಕಿಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರತಾನಿ, ಮುಖ್ಯ ಆಡಳತಾಧಿಕಾರಿ ರಾಜಶ್ರೀ ಜೈನಾಪೂರ, ಡಾ.ಲಕ್ಷ್ಮಿಕಾಂತ ಲೋಕರೆ ಹಾಗೂ ಇತರರು ಉಪಸ್ಥಿತರಿದ್ದರು.